ಕನ್ನಡ ಜಾಗೃತಿ ವೇದಿಕೆ ವತಿಯಿಂದ ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ

2 years ago

ಬೆಂಗಳೂರು: ಕನ್ನಡ ಜಾಗೃತಿ ವೇದಿಕೆ 30 ವರ್ಷದ ಸಂಭ್ರಮಾಚರಣೆ ಶುಭ ಸಂದರ್ಭದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮ ಮತ್ತು ಕರ್ನಾಟಕ ಏಕೀಕರಣ ಮತ್ತು ಕನ್ನಡ ಜಾಗೃತಿ ವೇದಿಕೆ – ೩೦ಸಂಭ್ರಮಾಚರಣೆಯನ್ನು ಅರಮನೆ ಮೈದಾನದಲ್ಲಿ ತ್ರಿಪುರವಾಸಿನಿ ಸಭಾಂಗಣದಲ್ಲಿ ಅದ್ದೂರಿಯಾಗಿ ಫೆಬ್ರವರಿ 4ನೇ ತಾರೀಖು ಆಚರಿಸಲಾಗುತ್ತಿದೆ ಎಂದು ಕನ್ನಡ ಜಾಗೃತಿ ವೇದಿಕೆ ವತಿಯಿಂದ ರಾಜ್ಯಾಧ್ಯಕ್ಷ ಕೆ.ಮಂಜುನಾಥದೇವರು ಹೇಳಿದರು.

ಬೆಂಗಳೂರು ಪ್ರಸ್ ಕ್ಲಬ್ ಸಭಾಂಗಣದಲ್ಲಿ ಪದಾಧಿಕಾರಿಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಫೆಬ್ರವರಿ 4ರಂದು ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಶಾಸಕರಾದ ಅಶೋಕ್ ಪಟ್ಟಣ, ಬಿ.ಶಿವಣ್ಣ ಮತ್ತು ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್ ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ನಟ ಧ್ರುವ ಸರ್ಜಾ, ಮೋಹಕತಾರೆ ಪ್ರೇಮಾ ಆಗಮಿಸಲಿದ್ದಾರೆ. ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ಸಾಧಕ/ಸಾಧಕಿಯರಿಗೆ ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ರಾಜ್ಯ ಎಲ್ಲ ಜಿಲ್ಲೆಗಳಿಂದ 10 ಸಾವಿರ ವೇದಿಕೆಯ ಸದಸ್ಯರು ಭಾಗವಹಿಸಲಿದ್ದಾರೆ. ರಾಜ್ಯ ನೆಲ, ಜಲ ಮತ್ತು ಭಾಷೆಯ ಬೆಳವಣಿಗೆ ಮತ್ತು ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆ ಮತ್ತು ಪರಿಹಾರ ಕುರಿತು ಚರ್ಚಿಸಲಾಗುವುದು ಎಂದರು.

Leave a Reply