ಕಳೆದ ಹತ್ತು ವರ್ಷದಿಂದ ಕಾಂಗ್ರೆಸ್ ಪಕ್ಷ ದೇಶದಲ್ಲಿ ಅತ್ಯಂತ ಸಂಕಟದಲ್ಲಿತ್ತು. ನಮ್ಮ ಪಕ್ಷದಿಂದ ಚುನಾಯಿತರಾದ ನೂರಾರು ಜನ ಪ್ರತಿನಿಧಿಗಳು ಎಲ್ಲಾ ಹಂತದಲ್ಲೂ ಬೇರೆ ಬೇರೆ ಕಾರಣಗಳಿಗೆ ಪಕ್ಷಾಂತರವನ್ನು ಮಾಡಿದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ನಮ್ಮ ಪಕ್ಷದಲ್ಲಿ ಸಾಕಷ್ಟು ಅನುಕೂಲಗಳನ್ನು ಪಡೆದು ಅಧಿಕಾರವನ್ನು ಅನುಭವಿಸಿದವರು ನಮ್ಮ ವಿರುದ್ಧ ತಿರುಗಿ ಬಿದ್ದರು. ಅನೇಕ ಚುನಾವಣೆಗಳಲ್ಲಿ ಹಣಬಲದ ಕೊರತೆ ಮತ್ತು ಇತರೆ ಕಾರಣಗಳಿಂದ ಚುನಾವಣೆಗಳಲ್ಲಿ ಸೋಲನ್ನು ಅನುಭವಿಸಬೇಕಾಯಿತು. ಈ ಹಿನ್ನೆಲೆಯಲ್ಲಿ ಎಲ್ಲರಲ್ಲೂ ಒಂದು ರೀತಿಯಲ್ಲಿ ಆತಂಕವಿತ್ತು. ನಮ್ಮ ಪಕ್ಷದ ಭವಿಷ್ಯದ ಬಗ್ಗೆ ಭಯವಿತ್ತು. ಆದರೆ ಇಂತಹ ಸಂಕಷ್ಟದ ಸಮಯದಲ್ಲಿ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆರವರು ತಮ್ಮ ಪರಿಶ್ರಮ ಮತ್ತು ಅನುಭವದ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ಚೇತರಿಕೆಗೆ ಪ್ರಮುಖ ಕಾರಣಕರ್ತರಾದರು. ಇವರು ಅಧ್ಯಕ್ಷರಾದ ನಂತರ ಹಿಮಾಚಲ ಪ್ರದೇಶ ತೆಲಂಗಾಣ ಮತ್ತು ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು.
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ತಮ್ಮ 81 ವರ್ಷದ ಈ ಸಂದರ್ಭದಲ್ಲಿ ನೂರಾರು ದಿನಗಳ ಕಾಲ ದೇಶದಾದ್ಯಂತ ಸುತ್ತಾಡಿ, ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಸಂಘಟನೆಯನ್ನು ಮಾಡಿ ಕಾಲಕಾಲಕ್ಕೆ ಕೈಗೊಳ್ಳಬೇಕಾದಂತಹ ರಾಜಕೀಯ ನಿರ್ಧಾರಗಳನ್ನು ಗಟ್ಟಿಯಾಗಿ ತೆಗೆದುಕೊಂಡು ನಮ್ಮ ಜೊತೆಯಲ್ಲಿ ಇರುವ ಬೇರೆ ಬೇರೆ ಪಕ್ಷದ ನಾಯಕರೊಂದಿಗೆ ನಿರಂತರ ಸಂಪರ್ಕವನ್ನು ಸಾಧಿಸಿ ಹೊಂದಾಣಿಕೆಯಲ್ಲಿ ಎಲ್ಲಿಯೂ ಭಿನ್ನಾಭಿಪ್ರಾಯ ಬರದಂತೆ ಎಚ್ಚರಿಕೆಯಿಂದ ನಡೆದುಕೊಂಡಿರುತ್ತಾರೆ.
ಇಂದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸರಿ ಸುಮಾರು ಒಂದು ನೂರು ಸದಸ್ಯರನ್ನ ಹೊಂದುವಲ್ಲಿ ಯಶಸ್ವಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷ ಎಲ್ಲ ಲೋಕಸಭಾ ಕ್ಷೇತ್ರದಲ್ಲಿ ವಿಜೃಂಭಿಸಿದೆ. ಇದಕ್ಕೆ ಕಾರಣ ಮಲ್ಲಿಕಾರ್ಜುನ ಖರ್ಗೆರವರು. ನಮ್ಮ ಕೇಂದ್ರ ಸರ್ಕಾರ ಇದ್ದ ಸಂದರ್ಭದಲ್ಲಿ ಜಾರಿಗೆ ತಂದಿದಂತಹ 370 ಜೆ ಸಂವಿಧಾನ ತಿದ್ದುಪಡಿಯ ಅನುಕೂಲತೆಗಳು ಸಹ ಪ್ರಮುಖವಾಗಿರುತ್ತದೆ.
ಕಲ್ಯಾಣ ಕರ್ನಾಟಕದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ತಾವು ಮಂತ್ರಿಯಾಗಿದ್ದಾಗ ಕೈಗೊಂಡ ಹಿನ್ನೆಲೆಯಲ್ಲಿ ಅಲ್ಲಿನ ಜನತೆ ಇವರ ಮೇಲೆ ವಿಶ್ವಾಸವನ್ನಿಟ್ಟು ಇವರು ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಕಾರಣದಿಂದ ಇವರ ವರ್ಚಸ್ಸಿಗೆ ದಕ್ಕೆ ಬಾರದ ರೀತಿಯಲ್ಲಿ ಎಲ್ಲ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸದಸ್ಯರನ್ನ ಆಯ್ಕೆ ಮಾಡಿ ಇವರಿಗೆ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ಕರ್ನಾಟಕದಿಂದ ಈ ಹಿಂದೆ ನಿಜಲಿಂಗಪ್ಪನವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ಆದರೆ ಅಂದಿನ ಸಂದರ್ಭವೇ ಬೇರೆ ಅಂದು ಇಂದಿರಾ ಗಾಂಧಿರವರ ಪ್ರಭಾವವಿತ್ತು. ದೇಶದಲ್ಲಿ ಕಾಂಗ್ರೆಸ್ಸಿಗೆ ಪರ್ಯಾಯವಾದ ಅಂತಹ ಶಕ್ತಿ ಬಹಳಷ್ಟು ರಾಜ್ಯಗಳಲ್ಲಿ ಇರಲಿಲ್ಲ. ಆದರೆ ಮಲ್ಲಿಕಾರ್ಜುನ ಖರ್ಗೆರವರು ಅಧ್ಯಕ್ಷರಾಗಿರುವ ಸಂದರ್ಭವೇ ಬೇರೆಯಾಗಿದೆ. ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರವಿಲ್ಲ.
ಜೊತೆಗೆ ಬಿಜೆಪಿ ದೇಶದಾದ್ಯಂತ ಪ್ರಬಲವಾಗಿ ಬೆಳೆದಿದೆ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿದ್ದು ಅನೇಕ ರೀತಿಯ ಅಡ್ಡಿ ಆತಂಕಗಳನ್ನ ಪದೇಪದೇ ಒಡ್ಡುತ್ತಲಿದ್ದಾರೆ. ಇಂತಹ ಸಂದರ್ಭದಲ್ಲಿ ಅಧ್ಯಕ್ಷರಾಗಿ ಕಾರ್ಯವನ್ನು ಮಾಡಿರುವ ಸೇವೆಯನ್ನು ಕಾಂಗ್ರೆಸ್ ಪಕ್ಷ ಎಂದು ಸಹ ಮರೆಯುವ ಹಾಗಿಲ್ಲ. ಕರ್ನಾಟಕ ರಾಜ್ಯದಲ್ಲಿ ಒಂಬತ್ತು ಸ್ಥಾನಗಳನ್ನ ಗೆಲ್ಲುವಲ್ಲಿ ಸಿದ್ದರಾಮಯ್ಯನವರ ವರ್ಚಸ್ಸು, ಡಿಕೆ ಶಿವಕುಮಾರ್ ಅವರ ಸಂಘಟನೆ ವಿಶೇಷವಾಗಿ ಮಲ್ಲಿಕಾರ್ಜುನ ಖರ್ಗೆರವರ ಪ್ರಭಾವ ಹೆಚ್ಚು ಪರಿಣಾಮವನ್ನು ಬೀರಿದೆ ಎಂದು ಅಭಿಮಾನದಿಂದ ಹೇಳಬೇಕಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರ ಜೊತೆಯಲ್ಲಿ ಸೇರಿ ಸಂಘಟಿಸಿರುತ್ತಾರೆ.
- ಕೆ ಎಸ್ ನಾಗರಾಜ್, ಬೆಂಗಳೂರು




