ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದ ಜಮೀನಿನಲ್ಲಿ 32 ಜೀವಂತ ನಾಡಬಾಂಬ್ ಗಳು ಪತ್ತೆಯಾಗಿದ್ದು,ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ಸರ್ವೆ ನಂಬರ್ 61ರಲ್ಲಿ ನಾಡಬಾಂಬ್ ಪತ್ತೆ ಆಗಿವೆ. ನಾಡಬಾಂಬ್ ಪತ್ತೆ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿ ಬರ್ಕತ್, ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕಾಡು ಪ್ರಾಣಿಗಳ ಬೇಟೆಗಾಗಿ ನಾಲ್ವರು ದುಷ್ಕರ್ಮಿಗಳು ನಾಡಬಾಂಬ್ ಇಟ್ಟಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳನ್ನ ಕಂಡು 2 ಬೈಕ್ ಬಿಟ್ಟು ನಾಲ್ವರು ಪರಾರಿಯಾಗಿದ್ದಾರೆ. ಗಸ್ತು ತಿರುಗುತ್ತಿದ್ದಾಗ ರಸ್ತೆ ಬದಿ 2 ಬೈಕ್ ಗಳನ್ನು ಅರಣ್ಯ ಸಿಬ್ಬಂದಿ ನೋಡಿದ್ದಾರೆ. ಅನುಮಾನಗೊಂಡು ಕಾಡಿನೊಳಗೆ ಹೋದಾಗ ಬಾಂಬ್ ಇಡಲು ನಾಲ್ವರು ಸಂಚು ರೂಪಿಸಿರುವ ಸಂಗತಿ ಗೊತ್ತಾಗಿದೆ.
ಬಾಂಬ್ ಇಡಲು ಬಂದಿದ್ದ ನಾಲ್ವರ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು, ಮಾದಾಪುರ ಗ್ರಾಮದ ತಿಮ್ಮಪ್ಪ ಮತ್ತು ಗುಡ್ಡಪ್ಪ ಎಂಬುದು ತಿಳಿದುಬಂದಿದೆ. ಇಬ್ಬರನ್ನು ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ. ಇನ್ನು ಉಳಿದ ಇಬ್ಬರ ಮಾಹಿತಿಯನ್ನು ನ್ಯಾಮತಿ ಪೊಲೀಸರು ಕಲೆ ಹಾಕುತ್ತಿದ್ದಾರೆ. ಈ ಹಿಂದೆಯೂ ಆರೋಪಿಗಳು ಇದೇ ಅರಣ್ಯದಲ್ಲಿ ನಾಡಬಾಂಬ್ ಇಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.




