ಮಂಗಳೂರು: ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನದ ಸಂರಕ್ಷಣೆಗಾಗಿ,ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸಲು ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ ಘೋಷಣೆ ಯೊಂದಿಗೆ ಕಾರ್ಮಿಕ ವರ್ಗದ ನೇತ್ರತ್ವದಲ್ಲಿ ಅಖಿಲ ಭಾರತ ಕರೆಯ ಮೇರೆಗೆ ನಗರದಲ್ಲಿಂದು ಅಹೋರಾತ್ರಿ ಸಾಮೂಹಿಕ ಧರಣಿ ಸತ್ಯಾಗ್ರಹವನ್ನು ನಡೆಸಲಾಯಿತು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ, ದೇಶಕ್ಕೆ ಸ್ವಾತಂತ್ರ್ಯ ದೊರೆತು 77 ವರ್ಷಗಳು ಕಳೆದರೂ ಕೂಡ ದೇಶದ ಕಾರ್ಮಿಕ ವರ್ಗ ಹಾಗೂ ಜನಸಾಮಾನ್ಯರ ಬದುಕು ತೀವ್ರ ಸಂಕಷ್ಟದ ದಲ್ಲಿದೆ. ದೇಶದ ಆಳುವ ವರ್ಗ ಪ್ರಜ್ಞಾಪೂರ್ವಕವಾಗಿ ಕಾರ್ಪೊರೇಟ್ ಪರ ನೀತಿಗಳನ್ನು ಜಾರಿಗೊಳಿಸುವ ಮೂಲಕ ಉಳ್ಳವರ ಹಿತ ಕಾಪಾಡಲು ತುದಿಗಾಲಲ್ಲಿ ನಿಂತಿದೆ ಎಂದರು.
CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಕಾರ್ಮಿಕ ವರ್ಗದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸಮರಧೀರ ಹೋರಾಟದ ಪರಂಪರೆಯನ್ನು ಹೊಂದಿದೆ. ಅಂದು ಬ್ರಿಟೀಷ್ ಸಾಮ್ರಾಜ್ಯಶಾಹಿಗಳ ವಿರುದ್ದ ಪ್ರಬಲ ಪ್ರತಿರೋಧವೊಡ್ಡಿದ್ದ ದೇಶದ ಕಾರ್ಮಿಕ ವರ್ಗ ಇಂದು ಅಮೇರಿಕನ್ ಸಾಮ್ರಾಜ್ಯಶಾಹಿಗಳ ವಿರುದ್ದ ಸಮರಶೀಲ ಹೋರಾಟ ನಡೆಸುವ ಅನಿವಾರ್ಯತೆ ಸ್ರಷ್ಠಿಯಾಗಿದೆ ಎಂದರು.
ಸತ್ಯಾಗ್ರಹವನ್ನುದ್ದೇಶಿಸಿ ರೈತ ಸಂಘಟನೆಯ ಮುಖಂಡರಾದ ಕೆ.ಯಾದವ ಶೆಟ್ಟಿ, ಕಾರ್ಮಿಕ ನಾಯಕರಾದ ಬಿ ಎಂ.ಭಟ್, ಸುಕುಮಾರ್ ತೊಕ್ಕೋಟು, ಯುವಜನ ನಾಯಕರಾದ ಮುನೀರ್ ಕಾಟಿಪಳ್ಳ, ಮಹಿಳಾ ಮುಖಂಡರಾದ ಜಯಂತಿ ಶೆಟ್ಟಿ ಬ್ಯಾಂಕ್ ನೌಕರರ ಮುಖಂಡರಾದ ಬಿ ಎಂ.ಮಾಧವ ಮುಂತಾದವರು ಮಾತನಾಡಿದರು.
ಪ್ರತಿಭಟನೆಯಲ್ಲಿ CITU ನಾಯಕರಾದ ಯೋಗೀಶ್ ಜಪ್ಪಿನಮೊಗರು, ಪದ್ಮಾವತಿ ಶೆಟ್ಟಿ, ಸುಂದರ ಕುಂಪಲ, ರೋಹಿದಾಸ್,ರವಿಚಂದ್ರ ಕೊಂಚಾಡಿ, ವಸಂತಿ ,ಈಶ್ವರಿ, ರೈತ ನಾಯಕರಾದ ಸದಾಶಿವದಾಸ್, ಕೃಷ್ಣಪ್ಪ ಸಾಲ್ಯಾನ್, ಯುವಜನ ನಾಯಕರಾದ ಸಂತೋಷ್ ಬಜಾಲ್,ನವೀನ್ ಕೊಂಚಾಡಿ, ರಿಜ್ವಾನ್ ಹರೇಕಳ, ವಿದ್ಯಾರ್ಥಿ ನಾಯಕರಾದ ವಿನುಷ ರಮಣ ಸಾಮಾಜಿಕ ಚಿಂತಕರಾದ ಪ್ಲೇವಿಕ್ರಾಸ್ತಾ ಅತ್ತಾವರ, ಮೀನಾ ಟೆಲ್ಲಿಸ್, ಬಿ ಎನ್ ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು.




