ಕರ್ನಾಟಕ ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಜನರಿಗೆ ನೀಡಿದ ಐದು ಗ್ಯಾರಂಟಿಗಳ ಭರವಸೆಗಳಲ್ಲಿ ಅತ್ಯಂತ ಪ್ರಮುಖವಾದ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು 400 ಕೋಟಿ ಬಾರಿ ಪ್ರಯಾಣದ ಮೂಲಕ ದೇಶದಲ್ಲಿ ಹೊಸ ಇತಿಹಾಸದ ನಿರ್ಮಾಣಕ್ಕೆ ನಾಂದಿಯಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಭಾರತ ದೇಶದ ಇತಿಹಾಸದಲ್ಲಿ ಯಾವುದೇ ಒಂದು ಸರ್ಕಾರದ ಯೋಜನೆ ಇಷ್ಟೊಂದು ಅಲ್ಪ ಅವಧಿಯಲ್ಲಿ ಇಷ್ಟು ಪ್ರಮಾಣದ ನಾಗರಿಕರಿಗೆ ಅನುಕೂಲವನ್ನು ಕಲ್ಪಿಸಿ ಕೊಟ್ಟಂತಹ ಉದಾಹರಣೆಯೇ ಇಲ್ಲ.
ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರ ಕನಸಿನ ಯೋಜನೆಯನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿರವರು ಅಚ್ಚುಕಟ್ಟಾಗಿ ಜಾರಿಗೊಳಿಸುತ್ತಿದ್ದಾರೆ. ಅವರಿಗೆ ಇರುವ ಆಡಳಿತದ ಅನುಭವ ಮತ್ತು ಹಿರಿತನದ ಹಿನ್ನೆಲೆಯಲ್ಲಿ ಯೋಜನೆ ಎಲ್ಲಿಯೂ ಲೋಪವಾಗದಂತೆ ಮುಂದುವರೆದುಕೊಂಡು ಬಂದಿದೆ.
ರಾಮಲಿಂಗಾರೆಡ್ಡಿರವರು ಸಾರಿಗೆ ಸಚಿವರಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಯ ಎಲ್ಲಿಯೂ ಲೋಪ ಬಾರದಂತೆ ಜಾರಿಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ವಿಶ್ವಾಸದಿಂದ ನಡೆದುಕೊಳ್ಳುತ್ತಾ ಕಾರ್ಯಕ್ರಮವನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಜನಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿದ್ದಾರೆ.
ರಾಜ್ಯ ಸರ್ಕಾರ ಈ ಯೋಜನೆಗಾಗಿ ಇಲ್ಲಿಯ ತನಕ 9,000 ಕೋಟಿಗೂ ಹೆಚ್ಚು ಹಣವನ್ನು ನೀಡಿರುವುದು ದೊಡ್ಡ ಸಾಧನೆಯೇ ಸರಿ. ರಾಜ್ಯದ ಕೋಟ್ಯಾಂತರ ಮಹಿಳೆಯರು ಇದನ್ನು ಉಪಯೋಗಿಸಿಕೊಂಡು ತಮ್ಮ ಕೆಲಸ ಕಾರ್ಯಗಳಿಗೆ ಹೋಗುತ್ತಿದ್ದಾರೆ ಮತ್ತಷ್ಟು ಮಹಿಳೆಯರು ಜೀವನದಲ್ಲಿ ಎಂದೂ ಕಾಣದಂತಹ ತಮ್ಮ ಭಕ್ತಿಯ ದೇಗುಲಗಳಿಗೆ ಹೋಗಿ ಬರುತ್ತಿದ್ದಾರೆ. ಅದೇ ರೀತಿಯಲ್ಲಿ ಮಹಿಳೆಯರು ತಮ್ಮ ತವರಿನ ಮನೆಗೆ ಹೋಗಿ ಬರುತ್ತಿದ್ದಾರೆ ವಿಶೇಷವಾಗಿ ಅಸಂಘಟಿತ ಕಾರ್ಮಿಕರು ಮನೆ ಕೆಲಸದವರು ಮತ್ತು ಗಾರ್ಮೆಂಟ್ಸ್ ಕೆಲಸ ಮಾಡುವ ಮಹಿಳೆಯರು ಇದನ್ನು ಬಳಸಿಕೊಂಡು ಪ್ರತಿ ತಿಂಗಳು ಕೆಲವು ಸಾವಿರ ರೂಪಾಯಿಗಳನ್ನು ಉಳಿಸಿಕೊಂಡು ಆ ಹಣವನ್ನು ತಮ್ಮ ಮಕ್ಕಳ ವಿದ್ಯಾಭ್ಯಾಸ ಮತ್ತು ಇತರೆ ಅವಶ್ಯಕತೆ ವಾದ ವಿಚಾರಗಳಿಗೆ ಬಳಸಿಕೊಳ್ಳುತ್ತಿದ್ದಾರೆ.
ಭಾರತ ದೇಶದಲ್ಲಿ ಯಾವುದೇ ಒಂದು ರಾಜ್ಯ ಸರ್ಕಾರದ ಯೋಜನೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಜನರಿಗೆ ಅನುಕೂಲವನ್ನು ಕಲ್ಪಿಸಿಕೊಟ್ಟ ಉದಾಹರಣೆ ಎಲ್ಲಿಯೂ ಇಲ್ಲ. ಹೊಟ್ಟೆ ತುಂಬಿದ ಜನ ತಮ್ಮ ಬಾಯಿ ಚಪಲವನ್ನು ತೀರಿಸಿಕೊಳ್ಳುವ ಸಲುವಾಗಿ ಮಾತುಗಳನ್ನು ಆಡುತ್ತಲೇ ಇದ್ದಾರೆ ಆದರೆ ಬೆವರು ಸುರಿಸಿ ದುಡಿಯುವ ಶ್ರಮದ ಬದುಕಿನ ಮಹಿಳೆಯರು ಮತ್ತು ಆರ್ಥಿಕವಾಗಿ ಅಶಕ್ತರಾದಂತಹ ಮಹಿಳಾ ಸಮುದಾಯ ಈ ಯೋಜನೆಯ ಅತ್ಯಂತ ಸಂತೋಷದಿಂದ ಬಳಸಿಕೊಳ್ಳುತ್ತಿರುವ ಕಾರಣದಿಂದ 400 ಕೋಟಿ ಬಾರಿ ಪ್ರಯಾಣದ ಸಂಖ್ಯೆಯನ್ನು ಮೀರಿ ಸಾಗುತ್ತಿರಲು ಸಾಧ್ಯವಾಗುತ್ತಿದೆ.
ಇಂತಹ ಒಂದು ಅತ್ಯಂತ ಉಪಯುಕ್ತವಾದ ಬಡಜನ ಪರ ಕಾಳಜಿಯ ಯೋಜನೆಯನ್ನು ಜಾರಿಗೊಳಿಸಿದಂತಹ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರಿಗೆ ಮತ್ತು ವಿಶೇಷವಾಗಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿರುವ ಶಕ್ತಿ ಯೋಜನೆಯ ರೂವಾರಿ ಶ್ರೀರಾಮಲಿಂಗಾರೆಡ್ಡಿರವರಿಗೆ ಸಮಸ್ತ ಕರ್ನಾಟಕದ ಜನತೆಯ ಪರವಾಗಿ ಕೃತಜ್ಞತೆಗಳನ್ನು ಅರ್ಪಿಸಬೇಕಾಗಿದೆ.
ದೇವಾಲಯಗಳಿಗೆ ಭೇಟಿಕೊಡುತ್ತಿರುವ ಮಹಿಳೆಯರು ಸರ್ಕಾರಕ್ಕೆ ಒಳಿತನ್ನ ಬಯಸಿ ದೇವರಲ್ಲಿ ಪ್ರಾರ್ಥನೆಯನ್ನು ಸಲ್ಲಿಸುತ್ತಿರುವುದು ಈ ಯೋಜನೆಗೆ ಮತ್ತಷ್ಟು ಶಕ್ತಿ ತುಂಬಿದೆ. ಜನಸಾಮಾನ್ಯರ ಆಶೀರ್ವಾದ ಎಲ್ಲದಕ್ಕಿಂತ ಹೆಚ್ಚು ಪರಿಣಾಮವನ್ನು ಬೀರುತ್ತದೆ.
– ಕೆ ಎಸ್ ನಾಗರಾಜ್, ಬೆಂಗಳೂರು




