ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ಬಂದೇ ಬರುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಆಯುಕ್ತರನ್ನು ಯಾವ ಕಾರಣಕ್ಕಾಗಿ ಅಮಾನತು ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಒಬ್ಬ ಆಯುಕ್ತರೇ ಅಮಾನತುಗೊಂಡಿರುವುದರಿಂದ ಅಲ್ಲಿಗೆ ಹಗರಣ ನಡೆದಿದೆ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಿದೆ ಎಂದರು.
ಪ್ರಕರಣದಲ್ಲಿ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತಾಗಿರುವುದರಿಂದ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಬೇರೆ ದಾರಿಯೇ ಇಲ್ಲ ಎಂದರು.
ಕಾಂಗ್ರೆಸ್ ನವರು ಬಿಜೆಪಿ ಮೇಲೆ ಕೆಸರು ಎರಚುವ ಕೆಲಸ ಮಾಡುತ್ತಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಬಿಜೆಪಿ ಮನೆಯೊಂದು, ಮೂರು ಬಾಗಿಲು ಎನ್ನುವವರು ಮುಡಾ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಬಂದ ಮೇಲೆ ಎಷ್ಟು ಬಾಗಿಲುಗಳು ಇರುತ್ತವೆ ಎಂದು ಕಾದು ನೋಡಿ ಎಂದರು.
ವಾಲ್ಮೀಕಿ, ಮುಡಾ ಹಗರಣ ಹೊರತರುತ್ತಿದ್ದಂತೆ ಕಾಂಗ್ರೆಸ್ ನವರು ಬೆಚ್ಚಿ ಬಿದ್ದಿದ್ದಾರೆ. ಅದಕ್ಕಾಗಿ ಕೋವಿಡ್ ಮಧ್ಯಂತರದ ವರದಿ ಪಡೆದು ಹೆದರಿಸುವ ಪ್ರಯತ್ನ ಮಾಡಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ತಪ್ಪುಗಳು ಅಥವಾ ಹಗರಣಗಳು ನಡೆದಿಲ್ಲ. ವರದಿಯಲ್ಲಿ ಏನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಊಹಾಪೋಹದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.




