ಪರ್ಯಾಯ ವ್ಯವಸ್ಥೆವರೆಗೆ 10 ಎಚ್.ಪಿ ವರೆಗಿನ ಅಕ್ರಮ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಡಿತ ಇಲ್ಲ
ಬಳ್ಳಾರಿ: ರಾಜ್ಯದಲ್ಲಿ ಐಪಿ ಸೆಟ್ ಆರ್.ಆರ್ ನಂಬರ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡುತ್ತಿರುವುದು ದಾಖಲಾತಿಗಾಗಿ ಮಾತ್ರವೇ ಹೊರತು ಬೇರೆ ಉದ್ದೇಶವಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟೀಕರಣ ನೀಡಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಐಪಿ ಸೆಟ್ಗ್ಳ ಸಂಖ್ಯೆ ತಿಳಿದುಕೊಂಡು ಸಮರ್ಪಕ ವಿದ್ಯುತ್ ಪೂರೈಕೆಗೆ ಅನುಕೂಲವಾಗುವಂತೆ ಐಪಿ ಸೆಟ್ಗವಳ ಆರ್.ಆರ್.ನಂಬರ್ ಗೆ ಆಧಾರ್ ಸಂಖ್ಯೆ ಜೋಡಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ 10 ಎಚ್.ಪಿ.ವರೆಗಿನ ಕೃಷಿ ಪಂಪ್ ಸೆಟ್ಗರಳಿಗೆ ಈಗಾಗಲೇ ಉಚಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಆದರೆ, ಅವುಗಳಿಗೆ ಎಷ್ಟು ವಿದ್ಯುತ್ ಬೇಕು ಎಂಬ ಬಗ್ಗೆ ಸ್ಪಷ್ಟತೆ ಇಲ್ಲದೆ ಗೊಂದಲ ಉಂಟಾಗುತ್ತಿದೆ. ಅಕ್ರಮ ಪಂಪ್ ಸೆಟ್ಗಳಳಿಂದಾಗಿ ಸಕ್ರಮ ಪಂಪ್ಸೆಬಟ್ಗತಳಿಗೂ ವಿದ್ಯುತ್ ಸಮಸ್ಯೆಯಾಗುತ್ತಿದೆ. ಐಪಿ ಸೆಟ್ಗಟಳ ಆರ್.ಆರ್ ನಂಬರ್ ಗಳಿಗೆ ಆಧಾರ್ ಜೋಡಣೆ ಮಾಡಿದರೆ ಎಷ್ಟು ಪಂಪ್ ಸೆಟ್ಗೆಳಿವೆ ಮತ್ತು ಅವುಗಳಿಗೆ ಎಷ್ಟು ವಿದ್ಯುತ್ ಬೇಕು ಎಂಬ ಸ್ಪಷ್ಟತೆ ಸಿಗುತ್ತದೆ. ಅದಕ್ಕೆ ತಕ್ಕಂತೆ ಸಮರ್ಪಕ ವಿದ್ಯುತ್ ಪೂರೈಸಲು ಅನುಕೂಲವಾಗುತ್ತದೆ ಎಂದರು.
ಬರಗಾಲದ ಸಂದರ್ಭದಲ್ಲೂ ರಾಜ್ಯದ ರೈತರಿಗೆ ದಿನದ ಏಳು ಗಂಟೆ ವಿದ್ಯುತ್ ಪೂರೈಸಲಾಗಿದೆ. ಲೋಡ್ ಶೆಡ್ಡಿಂಗ್ ಮಾಡಿಲ್ಲ. ಭವಿಷ್ಯದಲ್ಲಿ ಬೇಡಿಕೆಗೆ ತಕ್ಕಂತೆ ವಿದ್ಯುತ್ ಲಭ್ಯವಿರುತ್ತದೆ. ಆದರೂ ಬೇರೆ ಬೇರೆ ಕಾರಣಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುತ್ತಿದೆ. ಈ ಸಮಸ್ಯೆ ಬಗೆಹರಿಸಿ ಸಮರ್ಪಕ ವಿದ್ಯುತ್ ಪೂರೈಕೆ ಉದ್ದೇಶದಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲು ನಿರ್ಧರಿಸಿದ್ದೇನೆ ಎಂದರು.
ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಅಕ್ರಮ ಐಪಿ ಸೆಟ್ಗುಳನ್ನು ಸಕ್ರಮಗೊಳಿಸಲಾಗುವುದು. ಅದಕ್ಕಿಂತ ಹೆಚ್ಚು ಅಂತರವಿರುವ ಕಡೆಗಳಲ್ಲಿ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗುಳನ್ನು ಒದಗಿಸಲಾಗುವುದು. ಇದಕ್ಕೆ ಕೇಂದ್ರ ಸರ್ಕಾರದಿಂದ ಶೇ.30 ಮತ್ತು ರಾಜ್ಯ ಸರ್ಕಾರದಿಂದ ಶೇ.50 ಸಬ್ಸಿಡಿ ನೀಡಲಾಗುತ್ತದೆ. ರೈತರು ಶೇ.20 ರಷ್ಟು ಮೊತ್ತ ಭರಿಸಿ ಪಂಪ್ ಸೆಟ್ ಹಾಕಿಸಿಕೊಳ್ಳಬಹುದು ಎಂದರು.
ವಿದ್ಯುತ್ ಪೂರೈಕೆ ಕುರಿತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಎಸ್ಕಾಂ ವ್ಯವಸ್ಥಾಪಕ ನಿರ್ದೇಶಕರು, ಆಯಾ ಜಿಲ್ಲೆಯ ಎಸ್ಕಾಂ ಮುಖ್ಯ ಎಂಜಿನಿಯರ್ಗವಳನ್ನು ಒಳಗೊಂಡಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ನಿರಂತರವಾಗಿ ಸಭೆ ನಡೆಸಬೇಕು ಎಂದು ಸೂಚಿಸಲಾಗಿದೆ. ಈ ಹಿಂದೆ ಸೂಚನೆ ನೀಡಿದ್ದರೂ ಕೆಲವರು ಸಭೆ ಕರೆದಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ರೀತಿಯ ಸಭೆಗಳನ್ನು ತಪ್ಪದೆ ಕರೆಯುವಂತೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಿಗೆ ಕೆಪಿಟಿಸಿಎಲ್ ನಿಂದ ಒಬ್ಬ ಪ್ರತಿನಿಧಿಯನ್ನು ಕಡ್ಡಾಯವಾಗಿ ಕಳುಹಿಸುವಂತೆ ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಶಾಸಕರಾದ ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.




