ಬೆಂಗಳೂರು: ಆಮ್ ಆದ್ಮಿ ಪಾರ್ಟಿಯ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಮಾಕ್ಷಿಪಾಳ್ಯ ವಾರ್ಡ್ ನಲ್ಲಿರುವ ಜಮ್ಸ್ ಇಂಗ್ಲಿಷ್ ಸ್ಕೂಲ್ ಮತ್ತು ಎಂಇಎಸ್ ಇಂಗ್ಲೀಷ್ ಸ್ಕೂಲ್ ಸಿದ್ದಾರ್ಥ ಹೈಸ್ಕೂಲ್ ಶಾಲಾ ಮಕ್ಕಳಿಗೆ ಹೊಸ ವರ್ಷದ ಶುಭಾಶಯ ಕೋರಿ ಸಿಹಿ ವಿತರಿಸುವ ಕಾರ್ಯಕ್ರಮ ನಡೆಯಿತು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಆಮ್ ಆದ್ಮಿ ಪಾರ್ಟಿಯ ಮುಖಂಡರಾದ ಎಸ್.ಸಿ.ವಿಜಯಕುಮಾರ್, ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ ವಿಜಯಶರ್ಮ, ರಾಜ್ಯ ಕಾರ್ಯದರ್ಶಿ ಗುರುಮೂರ್ತಿ, ರಾಜ್ಯ ಕಾರ್ಯಧ್ಯಕ್ಷ ಸೀತಾರಾಮ್ ಗುಂಡಪ್ಪ, ಜಿಬಿಎ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್, ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರಾ, GBA ಪಶ್ಚಿಮ ನಗರಪಾಲಿಕೆ ಉಸ್ತುವಾರಿ ಶಶಿಧರ ಆರಾಧ್ಯ, ವೇಣುಗೋಪಾಲ್, ಗೋವಿಂದರಾಜನಗರ ವಿಧಾನಸಭಾ ಅಧ್ಯಕ್ಷ ಸಮೀರ್ ಖಾನ್, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ರಾಮಚಂದ್ರ, ವರಸಿದ್ಧಿ ವಿನಾಯಕ ದೇವಸ್ಥಾನದ ಅಧ್ಯಕ್ಷ ಲೋಕೇಶ್, ಕಾರ್ಯದರ್ಶಿ ಉಮಾಶಂಕರ್ ರವರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ನವಜ್ಯೋತಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದರು.
ಆಮ್ ಆದ್ಮಿ ಪಾರ್ಟಿ ಜನಪರ ಹೋರಾಟ, ಪ್ರಾಮಾಣಿಕ ಪಾರದರ್ಶಕ ಭ್ರಷ್ಟಚಾರದ ವಿರುದ್ದ ಹೋರಾಟ ಮಾಡುವ ಪಾರ್ಟಿಯಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಉದ್ಯೋಗ, ಆರೋಗ್ಯ, ಸಾರ್ವಜನಿಕರಿಗೆ ಆಶ್ರಯ ಮೂರು ಸಮರ್ಪಕವಾಗಿ ಇದ್ದಾಗ ದೇಶ ಅಭಿವೃದ್ಧಿ ಸಾಧ್ಯ ಎಂದು ಮುಖಂಡರು ಹೇಳಿದರು.
ಆಮ್ ಆದ್ಮಿ ಪಕ್ಷದ ಸರ್ಕಾರ ನವದೆಹಲಿಯಲ್ಲಿ ಆಡಳಿತದಲ್ಲಿ ಬಡ, ಮಧ್ಯಮ ವರ್ಗದ ಕುಟುಂಬ ಮಕ್ಕಳಿಗೆ ಹೈಟೆಕ್ ಶಾಲೆಗಳನ್ನು ನಿರ್ಮಿಸಿ ವಿದ್ಯಾವಂತ ಸಮಾಜ ನಿರ್ಮಾಣಕ್ಕೆ ಸಾಧ್ಯವಾಯಿತು ಎಂದರು.
ಬಡವರಿಗೆ ಉತ್ತಮ ಆರೋಗ್ಯ ಸಿಗಬೇಕು ಎಂದು ಮೊಹಲ್ ಕ್ಲಿನಿಕ್ ಆರಂಭಿಸಲಾಯಿತು. ಸೂರು ಇಲ್ಲದ ಜನರಿಗೆ ಆಶ್ರಯ ನೀಡಿ ಸೂರು ಭಾಗ್ಯ ಕಲ್ಪಿಸಿದರು. ಮುಂಬರುವ ಜಿಬಿಎ 5 ಪಾಲಿಕೆಗಳ 369ಸ್ಥಾನಗಳಿಗೆ ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರುಳು ಸ್ಪರ್ಧಿಸಲಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಬ್ರಾಂಡ್ ಬೆಂಗಳೂರು ನಿರ್ಮಾಣ, ವಿಶ್ವ ಖ್ಯಾತಿ ಬೆಂಗಳೂರು ನಿರ್ಮಾಣ ಮಾಡಲಾಗುವುದು ಎಂದರು.







