ಬೆಂಗಳೂರು: ಬ್ರಾಹ್ಮಣ ಸಮಾಜವನ್ನು ಹೀಯಾಳಿಸುವುದು, ನಿಂದಿಸುವುದು, ಅಪಹಾಸ್ಯಕ್ಕೆ ಒಳಪಡಿಸುವುದು ಮತ್ತು ಬ್ರಾಹ್ಮಣರ ಮೇಲೆ ದೌರ್ಜನ್ಯವೆಸಗುವುದು ಸಾಮಾನ್ಯವಾಗಿದೆ. ಬ್ರಾಹ್ಮಣರು ಅಲ್ಪಸಂಖ್ಯಾತರಾಗಿದ್ದಾರೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್.ರಘುನಾಥ್ ರವರು ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗೆ ಹೇಳಿದರು. ಇಂತಹ ಘಟನೆಗಳು ವಿಪ್ರ ಸಮುದಾಯಕ್ಕೆ ಅಪಮಾನ ಮಾಡಿರುವ ಖಂಡನೆ ವ್ಯಕ್ತಪಡಿಸಿ ಕುರಿತು ಮಾಧ್ಯಮಗೋಷ್ಠಿ ಏರ್ಪಡಿಸಿದ್ದರು.
ಎಸ್.ರಘುನಾಥ್ ಮಾತನಾಡಿ, ಇಂತಹ ಕಹಿ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗಿದೆ. ಶಿಕ್ಷಣ ಸಚಿವರು ವಿದ್ಯಾರ್ಥಿ ಪರೀಕ್ಷೆ ಬರೆಯಲು ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ ಮತ್ತು ಸಿ.ಇ.ಟಿ.ಪ್ರಾಧಿಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿರುವುದು ಸಮಾಧಾನಕರ ಸಂಗತಿ ಎಂದರು.
ಜನಿವಾರ ಕಿತ್ತು ಹಾಕಿರುವುದರಿಂದ ಬ್ರಾಹ್ಮಣ ಸಮುದಾಯವು ರಾಜ್ಯಾದ್ಯಂತ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲ ಕಡೆಗಳಲ್ಲಿ ಪ್ರತಿಭಟನೆಯಾಗುತ್ತಿದೆ. ವಿಪ್ರ ಸಮುದಾಯದಕ್ಕೆ ಆಗಿರುವ ನೋವು, ಸಂಕಷ್ಟಗಳು ಎದುರಿಸುತ್ತಿರುವ ಸಮಸ್ಯೆಗಳು ಕುರಿತು ಮಹಾಸಭಾದಿಂದ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳಲಾಗುವುದು ಎಂದರು.
ಸಿ.ಇ.ಟಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಬ್ರಾಹ್ಮಣ ವಿದ್ಯಾರ್ಥಿಗೆ ಶಿಕ್ಷಣಕ್ಕೆ ಬೇಕಾದ ಆರ್ಥಿಕ ಸಹಾಯ ಮಹಾಸಭಾದಿಂದ ನೀಡಲಾಗುವುದು. ನಮ್ಮ ಸಂಪ್ರಾದಯ, ಸಂಸ್ಕೃತಿ ಎತ್ತಿಹಿಡಿದಿದ್ದಾನೆ ಎಂದರು.
ಆರ್.ಲಕ್ಷ್ಮಿಕಾಂತ್ ಮಾತನಾಡಿ, ಯಾರು ಏನು ಬೇಕಾದರು ಬ್ರಾಹ್ಮಣರ ಮೇಲೆ ದಬ್ಬಾಳಿಕೆ ಮಾಡಬಹುದು ಎಂದು ತಿಳಿದಿದ್ದಾರೆ. ಜನಿವಾರ ವಿವಾದ ಇಡಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಪರೀಕ್ಷೆ ಬರೆಯಲು ಲಕ್ಷಾಂತರ ವಿದ್ಯಾರ್ಥಿಗಳು ಬರುತ್ತಾರೆ. ಅದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗೆ ಈ ಪರೀಕ್ಷೆ ಮಾಡಬೇಕು ಎಂದರೆ ಪೂರ್ವನಿಯೋಜಿತ ಸಂಚು ಎಂದು ಕಾಣುತ್ತದೆ ಎಂದರು.
ಸಂವಿಧಾನದಲ್ಲಿ ಬ್ರಾಹ್ಮಣರಿಗೆ ಬದುಕಲು ಅವಕಾಶ ನೀಡಿದೆ. ಬ್ರಾಹ್ಮಣರಿಗೆ ಅಪಮಾನ, ತೇಜೋವಧೆ ಮಾಡಿದರೆ ಉಗ್ರ ಪ್ರತಿಭಟನೆ ಮಾಡಲಾಗುವುದು. ಸರ್ಕಾರ ಇಂತಹ ಘಟನೆಗಳ ವಿರುದ್ದ ತತಕ್ಷಣ ಕ್ರಮ ಕೈಗೊಳ್ಳಬೇಕು, ಹೋಂ ಗಾರ್ಡ್ ಕೆಲಸದ ಆದೇಶ ಪಾಲಿಸುತ್ತಾನೆ ಅವನನ್ನ ಬಲಿಪಶು ಮಾಡುವ ಬದಲು ಅಧಿಕಾರಿಗಳ ತಲೆದಂಡವಾಗಬೇಕು ಎಂದರು.
ನಿರ್ದೇಶಕ ಅನುರಾಗ್ ಕಶ್ಯಪ್ ಮಾತನಾಡಿ, ಬ್ರಾಹ್ಮಣರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೆ ವ್ಯಕ್ತಪಡಿಸುತ್ತೇವೆ. ಅವರ ಮೇಲೆ ಪೊಲೀಸ್ ಠಾಣೆಗೆ ದೂರು ನೀಡಲಾಗುವುದು. ಬ್ರಾಹ್ಮಣರು ಸಮಾಜ, ದೇಶ ಜನರಿಗೆ ಒಳ್ಳೆಯದಾಗಬೇಕು ಎಂದು ಪೂಜೆ, ಹೋಮಹವನ ಮಾಡುತ್ತಾರೆ ಎಂದರು.
ಜಿಲ್ಲಾ ಪ್ರತಿನಿಧಿಗಳಾದ ಜಿ.ಎಸ್.ನಾಗೇಶ್, ಸತೀಶ್ ಉರಾಳ್, ಕೆ.ಎನ್.ರವಿಕುಮಾರ್, ಅಂಬಿಕಾ ರಾಮಚಂದ್ರ, ಮಂಜುನಾಥ್ ವಿಪ್ರಮುಖಂಡರು ಹಾಜರಿದ್ದರು.







