ಬೆಳಗಾವಿ: ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ವಾಲ್ಮೀಕಿ ಸಮಾಜದ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪದಡಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಲಾಗಿದ್ದು, ಬೆಳಗಾವಿಯಲ್ಲಿ ಪ್ರತಿಭಟನೆ ನಡೆದಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ವಾಲ್ಮೀಕಿ ಸಮಾಜದ ವಿರುದ್ಧ ಅವಹೇಳನಕಾರಿ ಹಾಗೂ ಅಶ್ಲೀಲ ಪದ ಬಳಕೆ ಮಾಡಿದ ಆರೋಪದಡಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಜಾತಿ ನಿಂದನೆ (ಅಟ್ರಾಸಿಟಿ) ಪ್ರಕರಣ ದಾಖಲಾಗಿದೆ.
ಇಲ್ಲಿನ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಅವರು ದೂರು ಸಲ್ಲಿಸಿದ್ದು, ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ಮತದಾನ ನಡೆಯುವ ಸಂದರ್ಭದಲ್ಲಿ ರಮೇಶ್ ಕತ್ತಿ ಅವರು, ವಾಲ್ಮೀಕಿ ಸಮಾಜದ ಬಗ್ಗೆ ಹಗುರ ಹಾಗೂ ಅವಹೇಳನಕಾರಿ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಮುದಾಯದ ಮುಖಂಡರು ದೂರು ನೀಡಿದ್ದಾರೆ.




