ಕರ್ನಾಟಕ ಲೋಕಾಯುಕ್ತ
ಧಾರವಾಡ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ನವೆಂಬರ 21 ರಿಂದ 23 ವರೆಗೆ ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನವೆಂಬರ 21, 2024 ರಂದು ಬೆಳಿಗ್ಗೆ 10 ರಿಂದ 1:30 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ 5 ರವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಅಹವಾಲುಗಳನ್ನು ಸ್ವೀಕರಿಸಿ, ವಿಚಾರಣೆ ನಡೆಸಲಿದ್ದಾರೆ.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಸರ್ಕಾರಿ ಅಧಿಕಾರಿ, ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದಲ್ಲಿ ಅಥವಾ ಅಧಿಕಾರಿ, ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ದಾಖಲೆ ಸಾಕ್ಷಾಧಾರಗಳೊಂದಿಗೆ ಸಲ್ಲಿಸಬಹುದು.
ನವೆಂಬರ 22, 2024 ರಂದು ಬೆಳಿಗ್ಗೆ 10 ರಿಂದ 1:30 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ 5 ರವರೆಗೆ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ, ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಲಾಗುವುದು. ದೂರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕರ್ನಾಟಕ ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಿದೆ.



