ಬೆಂಗಳೂರು: ಭಯೋತ್ಪಾದಕರಿಗೆ ಜಾತಿ ಧರ್ಮ ಯಾವುದೂ ಇಲ್ಲ. ಸ್ಫೋಟ ನಡೆಸಿ ಜನರನ್ನು ಸಾಯಿಸುವ ಉಗ್ರರು ಹುಳ ಬಿದ್ದು ಸಾಯುತ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ಲಾಂನಲ್ಲಿ ಭಯೋತ್ಪಾದನೆಗೆ ಅವಕಾಶವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ದೆಹಲಿಯಲ್ಲಿ ನಡೆದಿರುವುದು ಸ್ಫೋಟ ಎಂಬ ಬಗ್ಗೆ ನನಗೆ ಅನುಮಾನ ಇಲ್ಲ. ಆದರೆ, ಬಿಹಾರ ವಿಧಾನಸಭೆ ಚುನಾವಣೆಗೆ ಒಂದು ದಿನ ಮೊದಲು ಈ ಸ್ಫೋಟ ಹೇಗೆ ನಡೆಯುವುದು ಎನ್ನುವುದು ನನ್ನ ಪ್ರಶ್ನೆಯಾಗಿದೆ ಎಂದರು.
ಬಿಹಾರ ವಿಧಾನಸಭಾ ಚುನಾವಣೆಗೆ ಇದರ ನಂಟಿದೆ ಎಂದು ಹೇಳುತ್ತಿಲ್ಲ. ಆದರೆ ಚುನಾವಣೆ ಸಮಯದಲ್ಲಿ ಹೇಗೆ ಸ್ಫೋಟ ನಡೆಯಿತು ಎಂಬ ಪ್ರಶ್ನೆಯನ್ನು ನಾನು ಕೇಳುತ್ತಿದ್ದೇನೆ. ಭಯೋತ್ಪಾದಕರಿಗೆ ಜಾತಿಯೇ ಇಲ್ಲ. ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಯಾರೂ ಅವಕಾಶನೇ ಕೊಟ್ಟಿಲ್ಲ ಎಂದರು.
ಅಂತೆಯೇ ಇಸ್ಲಾಂ ಧರ್ಮದ ಪ್ರಕಾರ ಭಯೋತ್ಪಾದನೆ ಮಾಡುವವನು ಮುಸ್ಲಿಂ ಅಲ್ಲ. ಹಾಗೇನಾದರೂ ಇಂತಹ ಕೃತ್ಯ ಎಸಗಿದರೆ ಹುಳ ಬಿದ್ದು ಸಾಯುತ್ತಾನೆ. ಆದರೆ ಕಾರ್ ಸ್ಫೋಟ ಪ್ರಕರಣದ ಬಗ್ಗೆ ಒಂದಿಷ್ಟು ಪ್ರಶ್ನೆಗಳು ಇವೆ. ನವೆಂಬರ್ 11ಕ್ಕೆ ಬಿಹಾರ ಚುನಾವಣೆ ನಡೆಯಿತು. ಒಂದು ದಿನದ ಮುಂದೆ ಬ್ಲಾಸ್ಟ್ ಆಗಿದೆ. ಅದು ಹೇಗೆ ಎಂದು ಪ್ರಶ್ನಿಸಿದರು.
ಟೆರರಿಸ್ಟ್ ಗಳಿಗೆ ರಾಜಕೀಯ ಸಂಪರ್ಕ ಇತ್ತು ಎನ್ನುವುದನ್ನು ನಾನು ಕೇಳ್ಪಟ್ಟಿದ್ದು ಹೇಳ್ತಿದ್ದೇನೆ. ಎಲ್ಲವೂ ಈಗ ಊಹಾಪೋಹಗಳು ಸೃಷ್ಟಿ ಆಗ್ತಿವೆ. ಹಾಗೇನಾದರೂ ಆದ್ರೆ ಯಾರಿಗೂ ಒಳ್ಳೆಯದಾಗಲ್ಲ ಎಂದರು.




