ಬೆಂಗಳೂರು: ಕಳೆದ 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ ಸಬಲೀಕರಣ ಪಕ್ಷ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡಿ ಮುಸ್ಲಿಂ ಮತ ಗಿಟ್ಟಿಸುವ ಪ್ರಯತ್ನ ನಡೆಸಿದ್ದ ಉದ್ಯಮಿ ನೌಹೀರಾ ಶೇಕ್ ಜನ ಸಾಮಾನ್ಯರನ್ನು ವಂಚಿಸಿದ ಆರೋಪದಲ್ಲಿ ಸಿಲುಕಿದ್ದಾರೆ.
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
- ಸರ್ವಜನಾಂಗದ ಶಾಂತಿಯ ತೋಟವೇ ನಮ್ಮ ಗುರಿ: ಸಿದ್ದರಾಮಯ್ಯ
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
ಬ್ಯಾಂಕ್ಗಳಿಗಿಂತ ಅಧಿಕ ಬಡ್ಡಿ ನೀಡುವುದಾಗಿ ಸಾರ್ವಜನಿಕರಿಂದ ಹಣ ಹೂಡಿಕೆ ಮಾಡಿಸಿಕೊಂಡು, ಮರು ಪಾವತಿಸದೆ ವಂಚಿಸಿದ ಪ್ರಕರಣದ ಆರೋಪಿ ನೌಹೀರಾ ಶೇಕ್ ಹಾಗೂ ಹೀರಾ ಗ್ರೂಪ್ನ ಒಡೆತನದ 27 ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದೆ. ಆಸ್ತಿಯ ಪ್ರಸ್ತುತ ಮಾರುಕಟ್ಟೆ ಮೌಲ್ಯ 103.4 ಕೋಟಿ ಎಂದು ಅಂದಾಜಿಸಲಾಗಿದೆ.
ಐಎಂಎ, ಆ್ಯಂಬಿಡೆಂಟ್ ಕಂಪನಿಗಳ ಹಗರಣದ ಮಾದರಿಯಲ್ಲೇ ಬ್ಯಾಂಕ್ ಗಳಿಗಿಂತ ಅಧಿಕ ಬಡ್ಡಿ ನೀಡುವುದಾಗಿ ಆಮಿಷವೊಡ್ಡಿದ್ದ ಹೀರಾ ಗೋಲ್ಡ್ ಕಂಪೆನಿ ಕರ್ನಾಟಕ, ಕೇರಳ, ಮಹಾರಾಷ್ಟ್ರ ತೆಲಂಗಾಣ, ದೆಹಲಿ ಸೇರಿದಂತೆ ಅನೇಕ ರಾಜ್ಯಗಳಲ್ಲಿ ನೂರಾರು ಸಾರ್ವಜನಿಕರಿಗೆ ವಂಚಿಸಿತ್ತು ಎಂದು ಇ.ಡಿ ತಿಳಿಸಿದೆ.
ಹೀರಾ ಗೋಲ್ಡ್ ಕಂಪನಿ ಮುಖ್ಯಸ್ಥೆಯಾಗಿದ್ದ ನೌಹೀರಾ ಶೇಕ್, ಆಲ್ ಇಂಡಿಯಾ ಮಹಿಳಾ ಎಂಪವರ್ಮೆಂಟ್ ಪಾರ್ಟಿ ಹೆಸರಿನಲ್ಲಿ ಪಕ್ಷ ಸ್ಥಾಪಿಸಿ 2018ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಖಾಸಗಿ ಟೀವಿ ಚಾನಲ್ ಸ್ಥಾಪನೆ ಸೇರಿ ಹಲವು ಸಾಹಸಗಳ ಮೂಲಕ ಗಮನ ಸೆಳೆದಿದ್ದರು. ಆದರೆ ಚುನಾವಣೆಯಲ್ಲಿ ಈ ಪಕ್ಷ ನೆಲಕಚ್ಚಿತ್ತು.




