ಬೆಂಗಳೂರು: ಹಲವು ಬಾರಿ ವಾರೆಂಟ್ ಜಾರಿಗೊಳಿಸಿದರೂ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ತನ್ನ ಮಗನ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಕಾಣಿಸಿಕೊಂಡು ಪೊಲೀಸರ ಅತಿಥಿಯಾಗಿದ್ದಾನೆ. ನ್ಯಾಯಾಲಯದಲ್ಲಿ ವಾರಂಟ್ ಜಾರಿಯಾದರೂ ಸಹ ತಲೆಮರೆಸಿಕೊಂಡಿದ್ದ ಮೊಹಮ್ಮದ್ ಫಾರೂಕ್ ಅಲಿಯಾಸ್ ಮೋಟಿ ಎಂಬಾತ ನನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕಳೆದ 12 ವರ್ಷಗಳ ಹಿಂದೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಮೊಹಮ್ಮದ್ ಫಾರೂಕ್ ವಿರುದ್ಧ 2015ರಲ್ಲಿ ನ್ಯಾಯಾಲಯ ವಾರಂಟ್ ಜಾರಿಗೊಳಿಸಿತ್ತು. ಆದರೆ, ಫಾರೂಕ್ 2022ರ ಬಳಿಕ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.
ಫಾರೂಕ್ಗಾಗಿ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು. ಆದರೆ, ಈತ ತನ್ನ ಮೊಬೈಲ್ ನಂಬರ್, ಹಾಗೂ ವಾಸಸ್ಥಳ ಬದಲಿಸಿಕೊಂಡು ಪೊಲೀಸರ ಕಣ್ಣಿಗೆ ಮಣ್ಣೆರೆಸಿಕೊಂಡು ಆರಾಮಾಗಿದ್ದ. ಅಷ್ಟೇ ಅಲ್ಲದೆ ಎರಡನೇ ಮದುವೆಯಾಗಿ ದೊಡ್ಡಕಲ್ಲಸಂದ್ರದಲ್ಲಿ ವಾಸವಾಗಿದ್ದ ಫಾರೂಕ್, ತನ್ನ ತಂದೆಯ ಸಾವಿನ ನಂತರ ಅಂತ್ಯಕ್ರಿಯೆಗೂ ಸಹ ಬಾರದೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ.
ಇತ್ತೀಚೆಗೆ ಇನ್ಸ್ಟಾಗ್ರಾಂ ಸ್ಟೋರಿಯೊಂದರಲ್ಲಿ ಮೊಹಮ್ಮದ್ ಫಾರೂಕ್ನ ಫೋಟೋ ಪ್ರಕಟಿಸಲಾಗಿತ್ತು. ಫೋಟೋ ಪ್ರಕಟವಾದ ಇನ್ಸ್ಟಾಗ್ರಾಂ ಐಡಿ, ಐಪಿ ಅಡ್ರೆಸ್ ಪರಿಶೀಲಿಸಿದಾಗ ಅದು ಮೊಹಮ್ಮದ್ ಫಾರೂಕ್ನ ಮಗನ ಹೆಸರಿನಲ್ಲಿರುವ ಮೊಬೈಲ್ ನಂಬರ್ನ ಆಧಾರದಲ್ಲಿ ಆ ಐಡಿ ಕ್ರಿಯೇಟ್ ಆಗಿರುವುದು ಪತ್ತೆಯಾಗಿತ್ತು.
ಜೊತೆಗೆ ಅದೇ ನಂಬರ್ನಿಂದ ಆನ್ಲೈನ್ನಲ್ಲಿ ಫುಡ್ ಆರ್ಡರ್ ಬಂದಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಆ ಆರ್ಡರ್ಗಳು ಪ್ಲೇಸ್ಮೆಂಟ್ ಆಗುತ್ತಿದ್ದ ಮಾಹಿತಿ ಆಧಾರದಲ್ಲಿ ಮೊಹಮ್ಮದ್ ಫಾರೂಕ್ನ ವಿಳಾಸವನ್ನ ಪೊಲೀಸರು ಪತ್ತೆಹಚ್ಚಿದ್ದರು. ನಂತರ ಆತನ ಚಲನವಲನಗಳ ಕುರಿತು ನಿಗಾವಹಿಸಿ, ಕೊನೆಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.




