ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ರಾಜ್ಯದಲ್ಲಿ ಹಿನ್ನಡೆಗೆ ಕಾರಣವಾದ ಅಂಶಗಳನ್ನು ಪತ್ತೆ ಹಚ್ಚಲು ಮುಂದಾಗಿರುವ ಹೈಕಮಾಂಡ್ ಇದೀಗ ಇದಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಲೋಕಸಭೆ ಚುನಾವಣೆಗೂ ಮೊದಲು ಕನಿಷ್ಠ 19 ಕ್ಷೇತ್ರದಲ್ಲಿ ಗೆಲುವು ಸಾಧಿಸಲೇಬೇಕು ಎಂದು ಪಣತೊಟ್ಟಿದ್ದ ಹೈಕಮಾಂಡ್ ಇದಕ್ಕಾಗಿ ರಾಜ್ಯದ ಹಲವು ಸಚಿವರಿಗೆ ಗುರಿ ನೀಡಿತ್ತು. ಅಷ್ಟೇ ಅಲ್ಲದೆ ಇದನ್ನು ಸಾಧಿಸಲು ವಿಫಲವಾಗುವವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಅಂತಹ ಸಚಿವರ ತಲೆದಂಡಕ್ಕೆ ಮುಂದಾಗಿದೆ.
ಪಕ್ಷ ಸಂಘಟನೆ ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ತಯಾರಿ ಕುರಿತಂತೆ ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆಯಲ್ಲಿ ಪಾಲ್ಗೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ವರಿಷ್ಠರು ಈ ಬಗ್ಗೆ ಸ್ಪಷ್ಟ ಸೂಚನೆ ರವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಕುಮಾರ್ ಸತ್ಯಶೋಧನಾ ಸಮಿತಿ ರಚಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣವಾದ ಅಂಶಗಳನ್ನು ಪತ್ತೆಹಚ್ಚಲು ವಿಭಾಗವಾರು 5 ಸತ್ಯಶೋಧನಾ ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿ ಎಲ್ಲಾ ಆಯಾಮಗಳಲ್ಲೂ ಅಧ್ಯಯನ ನಡೆಸಿ ವಿಸ್ತೃತ ವರದಿಯನ್ನು ನೀಡಬೇಕು ಎಂದು ಶಿವಕುಮಾರ್ ಸೂಚನೆ ನೀಡಿದ್ದಾರೆ.




