ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡುವವರ ವಿರುದ್ಧ ಕ್ರಮ: ಡಾ. ಜಿ ಪರಮೇಶ್ವರ್

3 years ago

ಬೆಂಗಳೂರು: ಆಧುನಿಕ ತಂತ್ರಜ್ಞಾನದ ನೆರವು ಪಡೆದುಕೊಂಡ ಖದೀಮರು ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಅಮಾಯಕರನ್ನು ನಂಬಿಸಿ ವಂಚಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಸೈಬರ್ ಕೇಂದ್ರಿತ ಅಪರಾಧಗಳ ಸಂಖ್ಯೆಯಂತೂ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿವೆ.

ಸೈಬರ್ ತಂತ್ರಜ್ಞಾನದ ನೆರವು ಪಡೆದಿರುವ ವಂಚಕರು ತಮ್ಮ ಮಾತಿನಿಂದ ಸಾರ್ವಜನಿಕರನ್ನು ಮಣಿಸಿ ಬ್ಯಾಂಕ್ ಖಾತೆಗಳ ವಿವರ ಪಡೆದು ಕ್ಷಣಮಾತ್ರದಲ್ಲಿ ಎಲ್ಲಾ ಹಣ ದೋಚಿ ನಾಪತ್ತೆಯಾಗುತ್ತಿದ್ದಾರೆ. ಇದೊಂದೇ ಅಲ್ಲ ಸೈಬರ್ ಕೇಂದ್ರಿತ ಅಪರಾಧಗಳ ಸ್ವರೂಪ ಭಿನ್ನವಾದ ವಿಭಿನ್ನವಾಗಿದ್ದು ಪ್ರತಿನಿತ್ಯ ನೂರಾರು ಪ್ರಕರಣಗಳು ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿವೆ. ಆದರೆ ಈ ಪ್ರಕರಣಗಳು ತೀವ್ರ ಗತಿಯಲ್ಲಿ ವಿಚಾರಣೆ ಅಥವಾ ತನಿಖೆ ನಡೆಯುತ್ತಿಲ್ಲ ಅಪರಾಧಗಳಿಗೆ ಶಿಕ್ಷೆಯಾಗುತ್ತಿಲ್ಲ ಹೀಗಾಗಿ ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಾಸಾಗುತ್ತಿವೆ.

ಇದೀಗ ಈ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರ್ಧರಿಸಿರುವ ಗೃಹ ಇಲಾಖೆ ಸೈಬರ್ ಅಪರಾಧಗಳ ತ್ವರಿತಗತಿಯಲ್ಲಿ ಪತ್ತೆ ಮಾಡಲು ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚಿಸಲು ತೀರ್ಮಾನಿಸಲಾಗಿದೆ.

ಸುದ್ದಿಗಾರರಿಗೆ ಈ ವಿಷಯ ತಿಳಿಸಿದ  ಗೃಹ ಸಚಿವ ಡಾ. ಜಿ ಪರಮೇಶ್ವರ್, ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕುವ ಜೊತೆಗೆ ಸಾಮಾಜಿಕ ಜಾಲತಾಣಗಳ ದುರ್ಬಳಕೆಗೆ ನಿಯಂತ್ರಣ ಹಾಕಲು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸಲು ಸದ್ಯದಲ್ಲೇ ಗೂಗಲ್, ಫೇಸ್ ಬುಕ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಸಭೆ ಕರೆಯಲಾಗುತ್ತಿದೆ ಎಂದು ಹೇಳಿದರು.
ಫೇಕ್ ಸುದ್ದಿ ಹರಿಬಿಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದಕ್ಕೆ ಮೊದಲು ಕಡಿವಾಣ ಹಾಕಲಾಗುವುದು. ಯಾರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡುತ್ತಾರೋ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಯಾವುದೇ ಪಕ್ಷ, ಸಂಘಟನೆ ಇರಲಿ ಕ್ರಮ ನಿಶ್ಚಿತ. ಈಗಿರುವ ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚಿಸಲಾಗುವುದು. ಸುಳ್ಳು ಸುದ್ದಿ ಹರಿಬಿಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದಕ್ಕೆ ಮೊದಲು ಕಡಿವಾಣ ಹಾಕಲಾಗುವುದು, ಯಾರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡುತ್ತಾರೆ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಖಡಕ್​ ಸೂಚನೆ ನೀಡಿದರು.

ಇದ್ದಕ್ಕಿದ್ದಂತೆ ಸಾಮಾಜಿಕ ಜಾಲಾತಾಣಗಳಲ್ಲಿ ನಕಲಿ ಪೋಸ್ಟ್ ಹಾವಳಿ ಹೆಚ್ಚಾಗಿವೆ. ಅದಕ್ಕೆ ಏನು ಕಾರಣ ಎಂದು ಹೇಳಲಾಗುವುದಿಲ್ಲ. ಕೆಲವು ಪ್ರಚೋದನಾತ್ಮಕ ಮಾಹಿತಿಗಳಿರುತ್ತವೆ, ಇನ್ನು ಕೆಲವು ಕಡೆ ಸುಳ್ಳು ಸುದ್ದಿಗಳನ್ನು ಹರಡಿ ಶಾಂತಿ ಕದಡುವ, ಗಲಭೆ ಎಬ್ಬಿಸುವ ಹುನ್ನಾರಗಳಿರುತ್ತವೆ. ಇವುಗಳನ್ನು ಹತ್ತಿಕ್ಕಲೇಬೇಕು. ಸುಳ್ಳು ಸುದ್ದಿ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಆದೇಶಿಸಿದರು.

Leave a Reply