ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ಎತ್ತುತ್ತಿರುವ ವಿರುದ್ಧ ಕ್ರಮ: ಎನ್.ಎಸ್.ಭೋಸರಾಜು

2 years ago

ಬೆಂಗಳೂರು: ರಾಜ್ಯದ ಸಣ್ಣ ನೀರಾವರಿ ಇಲಾಖೆಯ ಕೆರೆಗಳಲ್ಲಿ ಹೂಳನ್ನು ಅವೈಜ್ಞಾನಿಕವಾಗಿ ಎತ್ತಲಾಗುತ್ತಿದ್ದು, ಇದರಿಂದ ಕೆರೆಗಳಲ್ಲಿನ ನೀರು ಇಂಗಿಹೋಗಿ ನೀರಿನ ಅಭಾವ ಸೃಷ್ಟಿಗೆ ಕಾರಣವಾಗುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಸೂಚನೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ಸಣ್ಣ ನೀರಾವರಿ ಇಲಾಖೆಯ ಕೆರೆಗಳಲ್ಲಿ ಹೂಳನ್ನು ಎತ್ತುತ್ತಿದ್ದಾರೆ. ಕೆಲವು ಪ್ರಕರಣಗಳಲ್ಲಿ ನಿರ್ದಿಷ್ಟ ಮಿತಿಗಿಂತ ಜಾಸ್ತಿ ಮತ್ತು ಅವೈಜ್ಞಾನಿಕವಾಗಿ ಹೂಳನ್ನು ಎತ್ತುತ್ತಿರುವುದರಿಂದ ಸರಕಾರದ ಬೊಕ್ಕಸಕ್ಕೂ ನಷ್ಟ ಉಂಟಾಗುತ್ತಿದೆ ಎಂದಿದ್ದಾರೆ.

ಅಲ್ಲದೇ, ಈ ರೀತಿ ಅಸಮರ್ಪಕ ಮತ್ತು ಅವೈಜ್ಞಾನಿಕವಾಗಿ ಹೂಳು ಎತ್ತುತ್ತಿರುವುದರಿಂದ ಕೆರೆಗಳಲ್ಲಿನ ನೀರು ಇಂಗಿಹೋಗಿ ನೀರಿನ ಅಭಾವ ಸೃಷ್ಟಿಯಾಗುತ್ತಿದೆ. ಅಲ್ಲದೇ, ಅಂತರ್ಜಲ ಮಟ್ಟವೂ ಗಣನೀಯವಾಗಿ ಕ್ಷೀಣಿಸುತ್ತಿದೆ ಎಂದಿದ್ದಾರೆ.

Leave a Reply