ಬೆಂಗಳೂರು: ಸದನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಏಳು ಪುಟಗಳ ದೂರು ನೀಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ದೂರು ನೀಡುವುದಾಗಿ ಖಚಿತಪಡಿಸಿದ್ದಾರೆ. ಇಬ್ಬರ ದೂರು ಪರಿಶೀಲಿಸಿ ಸದನದ ಪರಿಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 19ರಂದು ಸದನದಲ್ಲಿ ನಡೆದ ಬೆಳವಣಿಗೆಯನ್ನು ಗಮನಿಸಿದ್ದೇನೆ. ದಾಖಲೆಗಳು ಪರಿಶೀಲಿಸಿದ್ದೇನೆ. ಇದನ್ನು ಬೆಳೆಸುವುದರಲ್ಲಿ ಅರ್ಥವಿಲ್ಲ. ಇದು ಇಲ್ಲಿಗೆ ಮುಗಿಯಲಿ ಎಂಬುದು ನನ್ನ ಅಪೇಕ್ಷೆ ಎಂದರು.
ವಿಧಾನಪರಿಷತ್ನಲ್ಲಿ ಇರುವ ಸಿ.ಸಿ.ಟಿವಿ ಕ್ಯಾಮೆರಾ ಹಾಗೂ ಆಡಿಯೊ ಅಧಿಕೃತ ದಾಖಲೆಗಳು. ಖಾಸಗಿ ಸುದ್ದಿವಾಹಿನಿಯಲ್ಲಿ ಬಿತ್ತರವಾದ ದೃಶ್ಯಗಳ ಬಗ್ಗೆ ಮಾಹಿತಿ ಇಲ್ಲ. ಈ ದೃಶ್ಯಗಳನ್ನು ನೀಡಿದರೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಖಚಿತಪಡಿಸಿಕೊಳ್ಳಲಾಗುವುದು ಎಂದರು.




