ಎಸ್‌ಸಿಪಿ, ಟಿಎಸ್‌ಪಿ ಹಣ ದುರ್ಬಳಕೆ ಮಾಡಿದವರ ವಿರುದ್ಧ ಕ್ರಮ ಆಗಬೇಕು: ವಿ ಎಸ್ ಉಗ್ರಪ್ಪ

2 years ago

ಬೆಂಗಳೂರು: ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಬಳಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಹೋರಾಟ ನಡೆಸುತ್ತಿರುವ ಬೆನ್ನಲ್ಲೇ ಆಡಳಿತರೂಢ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ವಿ.ಎಸ್.ಉಗ್ರಪ್ರ  ಇದಕ್ಕೆ ದನಿಗೂಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ಯಾರೇ ದುರ್ಬಳಕೆ ಮಾಡಿಕೊಳ್ಳಲಿ ಅವರ ವಿರುದ್ಧ ಕ್ರಮ ಆಗಬೇಕು ಎಂದರು.

ಕೆಲವು ಸಚಿವರಿಗೆ ಅರಿವು ಇಲ್ಲದೇ ದಲಿತರ ಹಣವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳುವುದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 180 ಕೋಟಿ ರೂ. ಭ್ರಷ್ಟಾಚಾರದ ಬಳಿಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಾಲ್ಮೀಕಿ ಸಮುದಾಯದ ಯುವಕರು ನಮ್ಮ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣ ದುರ್ಬಳಕೆ ಆಗದಂತೆ ಇನ್ನು ಮೇಲೆ ಕಾವಲು ನಾಯಿಗಳಾಗಿ ಕೆಲಸ ಮಾಡಲಿದ್ದೇವೆ ಎಂದರು. 

Leave a Reply