ಬೆಂಗಳೂರು: ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಉತ್ತೇಜನ ನೀಡಲು ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಅಡೆ ತಡೆ ನಿವಾರಿಸಲು ಮಂತ್ರಿಗಳಾದ ಕೆ.ಜೆ.ಜಾರ್ಜ್ ಮತ್ತು ಎಂ.ಬಿ.ಪಾಟೀಲ್ ಸೂಚಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಚಿಕ್ಕಮಗಳೂರು ಏರ್-ಸ್ಟ್ರಿಪ್ ನ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದ ಬಾಬ್ತಿನ 17.06 ಕೋಟಿ ರೂ.ಗಳನ್ನು ತ್ವರಿತವಾಗಿ ಬಿಡುಗಡೆ ಮಾಡುವ ಉದ್ದೇಶದಿಂದ ಈ ಯೋಜನೆಯ ಪ್ರಸ್ತಾವನೆಯನ್ನು ಮುಂಬರುವ ಸಚಿವ ಸಂಪುಟ ಸಭೆಗೆ ಮಂಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
2023-24ರ ಬಜೆಟ್ ನಲ್ಲಿ ಘೋಷಿಸಿದ್ದ ಚಿಕ್ಕಮಗಳೂರು ಮತ್ತು ಕೊಡಗು ಏರ್-ಸ್ಟ್ರಿಪ್ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.
ಚಿಕ್ಕಮಗಳೂರು ಏರ್-ಸ್ಟ್ರಿಪ್ ಯೋಜನೆಗೆ ಅಲ್ಲಿನ ಜಿಲ್ಲಾಡಳಿತ ಚಿಕ್ಕಮಗಳೂರು-ಹಿರೇಮಗಳೂರು ನಡುವೆ ಈಗಾಗಲೇ 137 ಎಕರೆ ಜಮೀನು ನೀಡಿದೆ. ಈ ಪೈಕಿ 120 ಎಕರೆ ಸರಕಾರಿ ಜಮೀನೇ ಆಗಿದೆ. ಉಳಿದ 17.1 ಎಕರೆ ಮಾತ್ರ ಖಾಸಗಿಯಾಗಿದ್ದು, ಇದರ ಸ್ವಾಧೀನ ಬಾಕಿ ಇದೆ. ಇದಕ್ಕೆ 24.6 ಕೋಟಿ ರೂ. ವೆಚ್ಚವಾಗಲಿದ್ದು, ಈಗಾಗಲೇ 7 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಉಳಿದಿರುವ 17.6 ಕೋಟಿ ರೂ.ಗಳ ಬಿಡುಗಡೆ ಬಾಕಿ ಇದೆ.
ಇದು ಸರಕಾರದ ಮುಂದೆ ಬಂದಿದ್ದು, ಬಳಿಕ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಬಾಕಿ ಹಣ ಬಿಡುಗಡೆ ಮಾಡುವಂತೆ ಸೂಚಿಸಲಾಗಿತ್ತು. ಇಲ್ಲಿಂದ ಈ ವಿಚಾರವು ಹಣಕಾಸು ಇಲಾಖೆಗೆ ಹೋಗಿದೆ. ಅಲ್ಲಿಂದ ಸಂಪುಟ ಸಭೆಯ ಮುಂದೆ ಬರಬೇಕಾಗಿದೆ. ಹೀಗಾಗಿ ಕೂಡಲೇ ಈ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಇಬ್ಬರೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಉದ್ದೇಶಿತ ಏರ್-ಸ್ಟ್ರಿಪ್ ನಲ್ಲೇ ಹೆಲಿಪೋರ್ಟ್ ಕೂಡ ಅಭಿವೃದ್ಧಿಪಡಿಸಲಾಗುವುದು. ಜತೆಗೆ ಮುಂಬರುವ ದಿನಗಳಲ್ಲಿ ಬೃಹತ್ ವಿಮಾನಗಳ ಪ್ರಯಾಣಕ್ಕೂ ಅನುಕೂಲವಾಗುವ ಹಾಗೆ ನಿಲ್ದಾಣ ಅಭಿವೃದ್ಧಿ ಪಡಿಸುವ ಉದ್ದೇಶ ಇಟ್ಟುಕೊಳ್ಳಬೇಕು. ಪೂರಕವಾಗಿ ಅಕ್ಕಪಕ್ಕದ ಜಮೀನು ಗುರುತಿಸುವುದು. ಮುಂದಿನ ದಿನಗಳಲ್ಲಿ ಇದನ್ನು ಸ್ವಾಧೀನ ಪಡಿಸಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗುವುದು. ಇದಕ್ಕೆ ಕೆಎಸ್ಐಐಡಿಸಿ ವತಿಯಿಂದ ಪರಿಣತರ ತಂಡವನ್ನು ಕಳಿಸಲಾಗುವುದು ಎಂದರು.
ಇದೇ ರೀತಿಯಲ್ಲಿ ಕೊಡಗಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸಮಸ್ಯೆ ತಲೆದೋರಿದೆ. ಇದನ್ನು ಆದಷ್ಟು ಬೇಗ ಬಗೆಹರಿಸಿ, ಜಾಗವನ್ನು ಗುರುತಿಸಬೇಕು ಎಂದು ನಿರ್ದೇಶನ ನೀಡಿದರು.




