ಬೆಂಗಳೂರು / ಡೆಹರಾಡೂನ್: ಕರ್ನಾಟಕದ ಚಾರಣಿಗರ ತಂಡವೊಂದು ಉತ್ತರಾಖಂಡದ ಎತ್ತರದ ಶಾಸ್ತ್ರತಾಳ್ ಮಯಳಿಗೆ ಎಂಬ ಪ್ರದೇಶದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಸಿಲುಕಿದೆ ಹಾಗೂ ಈ ತಂಡ ಪ್ರಸ್ತುತ ಅಪಾಯದಲ್ಲಿದೆ ಎಂಬ ಮಾಹಿತಿ ನಿನ್ನೆ ರಾತ್ರಿ ನಮಗೆ ತಿಳಿದುಬಂದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಪ್ರಸ್ತುತ ಕೆಲವರು ಈಗ ಕೊಖ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದಿದ್ದಾರೆ.
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಇಂದು ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಲಿದೆ. ಇದಲ್ಲದೆ, ಇಂದು ಬೆಳಿಗ್ಗೆ ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಲು ಪ್ರಾರಂಭಿಸಿದೆ. ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಈಗಾಗಲೇ ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದ್ದಾರೆ.




