ಬೆಂಗಳೂರು: ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಸಚಿವ ಬಿ.ನಾಗೇಂದ್ರ ಅವರಿಂದ ನಾವು ರಾಜೀನಾಮೆ ಕೇಳಿಲ್ಲ. ತನಿಖೆ ಮುಗಿದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ತನಿಖೆಗೆ ಮೊನ್ನೆಯಷ್ಟೇ ಎಸ್ಐಟಿ ರಚನೆ ಮಾಡಲಾಗಿದೆ. ಇನ್ನೂ ಯಾವುದೇ ವರದಿ ಬಂದಿಲ್ಲ. ಪ್ರಾಥಮಿಕ ವರದಿ ಬರಲಿ. ಅದರಲ್ಲಿ ಏನಿರುತ್ತದೆ ಎಂದು ನೋಡಿದ ಬಳಿಕ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾಗೇಂದ್ರ ಅವರಿಂದ ತಾವು ಯಾವುದೇ ವಿವರಣೆ ಕೇಳಿಲ್ಲ, ವರದಿ ಬರುವವರೆಗೂ ಕಾಯುತ್ತೇವೆ ಎಂದರು.
ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂ.6ರವರೆಗೆ ಗಡುವು ನೀಡುವ ಕುರಿತು ಕಿಡಿಕಾರದ ಅವರು, ನಮಗೆ ಗಡುವು ನೀಡಲು ಅವರು ಯಾರು ಎಂದು ಖಡಕ್ ಆಗಿ ಪ್ರಶ್ನಿಸಿದರು.
ವಿರೋಧಪಕ್ಷಗಳಿರುವುದೇ ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕೆಂದು. ಆದರೆ ಸುಳ್ಳು ಹೇಳಿಕೊಂಡು ಹೋರಾಟ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿ, ತಪ್ಪನ್ನು ಯಾರೇ ಮಾಡಿದರೂ ಅದು ತಪ್ಪು. ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಲೋಪಗಳಾಗಿದ್ದರೆ ಅದನ್ನು ಪರಿಶೀಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಬಿಜೆಪಿಯವರಿಗೆ ಟೀಕೆ ಮಾಡುವ ನೈತಿಕತೆ ಇಲ್ಲ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿದರು.
ಬಿಜೆಪಿ ಅಧಿಕಾರವಧಿಯಲ್ಲಿ ಹಲವು ರೀತಿಯ ಹಗರಣಗಳಾಗಿದ್ದವು. ತಪ್ಪು ಯಾರೇ ಮಾಡಿದ್ದರೂ ಅದು ತಪ್ಪು. ಬಿಜೆಪಿ ಸರ್ಕಾರದ 4 ವರ್ಷದ ಆಡಳಿತದಲ್ಲಿ ಜವಳಿ ನಿಗಮದಲ್ಲಿ ಮೈಸೂರು ಸ್ಯಾಂಡಲ್ ಸೋಪು ನಿಗಮ ಸೇರಿದಂತೆ ಪ್ರತಿ ಮಂಡಳಿಯಲ್ಲೂ ಹಗರಣಗಳಾಗಿದ್ದವು. ಹಿಂದೆ ಲೋಪಗಳಾಗಿದ್ದವು ಎಂಬ ಕಾರಣಕ್ಕೆ ಅದು ಮುಂದುವರೆಯಬೇಕು ಎಂದು ನಾವು ಬಯಸುವುದಿಲ್ಲ ಎಂದರು.




