ಹಿಂದುತ್ವದ ಬಗ್ಗೆ ನಟ ಚೇತನ್ ಕೆಟ್ಟದಾಗಿ ಪೋಸ್ಟ್ ಆರೋಪ: ಬಂಧನ

3 years ago

ಬೆಂಗಳೂರು: ಎಡ ಪಂಥೀಯ ವಿಚಾರಧಾರೆ ಹಾಗೂ ಬಿಜೆಪಿ ವಿರುದ್ಧದ ಹೇಳಿಕೆ, ಸಿದ್ಧಾಂತಗಳ ಮೂಲಕ ಸುದ್ದಿಯಾಗುತ್ತಿರುವ ಆ ದಿನಗಳು ಖ್ಯಾತಿಯ ಚೇತನ್ ಅಹಿಂಸಾ ಅವರನ್ನು ‌ ಪೊಲೀಸರು ಬಂಧಿಸಿದ್ದಾರೆ.

ಹಿಂದುತ್ವದ ಬಗ್ಗೆ ನಟ ಚೇತನ್ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ದ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಶೇಷಾದ್ರಿಪುರಂ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295ಎ, 505ಬಿ ಅಡಿಯಲ್ಲಿ ಪ್ರಕರಣ ದಾಖಲು ಮಾಡಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಹಿಂದೂಪರ ಸಂಘಟನೆಗಳು ಚೇತನ್ ವಿರುದ್ಧ ದೂರು ನೀಡಿದ್ದವು. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಚೇತನ್ ಟ್ವೀಟ್ನಲ್ಲೇನಿದೆ: ‘ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಇದು ಒಂದು ಸುಳ್ಳು.
1992ರಲ್ಲಿ ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ಯಾಗಿತ್ತು ಎನ್ನುವುದು ಒಂದು ಸುಳ್ಳು.
ಈಗ 2023ರಲ್ಲಿ: ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು `ಸತ್ಯವೇ ಸಮಾನತೆ’ ಎಂದು ಅವರು ಬರೆದುಕೊಂಡಿದ್ದರು. ಇದು‌ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿತ್ತು.

ಕಳೆದ ವರ್ಷವೂ ಸೆರೆ: ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಚೇತನ್ ಅವರು ಬಂಧಿತರಾಗಿದ್ದರು. ಚೇತನ್ ಟ್ವೀಟ್ ಒಂದನ್ನು ಮಾಡಿದ್ದರು. ಹಿಜಾಬ್ ವಿಚಾರವನ್ನು ಪ್ರಸ್ತಾಪಿಸುತ್ತಾ ಹೈಕೋರ್ಟ್ ಜಡ್ಜ್  ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಬಂಧನ ಆಗಿತ್ತು. ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ನಂತರ ಬಿಡುಗಡೆ ಮಾಡಲಾಗಿತ್ತು.

Leave a Reply