ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ವಶಪಡಿಕೊಳ್ಳಲಾದ 82 ಲಕ್ಷ ರೂ ಹಣಕ್ಕೆ ಯಾವುದೇ ದಾಖಲೆ ತೋರಿಸಲು ನಟ ದರ್ಶನ್ ವಿಫಲರಾಗಿದ್ದಾರೆ. ಈ ಹಣ ತಮಗೆ ಕೃಷಿ ಹಾಗೂ ಪಶು ಸಂಗೋಪನೆಯಿಂದ ಬಂದಿರುವ ಆದಾಯ ಎಂದು ದರ್ಶನ್ ತಿಳಿಸಿದ್ದಾರೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಆದರೆ, ಅದಕ್ಕೆ ಪೂರಕವಾಗಿ ದಾಖಲೆ ನೀಡಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಐಟಿ ಹಾಗೂ ಪೊಲೀಸರು ಹಣದ ಮೂಲ ಶೋಧನೆಗೆ ಇಳಿದಿದ್ದಾರೆ. ಇನ್ನು ಈ ಹಣವನ್ನು ಕೊಲೆ ಪ್ರಕರಣದ ಸಾಕ್ಷಿ ನಾಶಕ್ಕೆ ಬಳಸಲಾಗಿದೆ ಎಂದು ಮಾಹಿತಿ ಪಡೆದಿರುವ ಪೊಲೀಸರು ಆ ಕುರಿತು ತನಿಖೆ ನಡೆಸುತ್ತಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶಕ್ಕೆ 82 ಲಕ್ಷ ರೂ. ನಗದು ಹಣ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ದರ್ಶನ್ ಹೇಳಿಕೆ ಪಡೆಯಲಾಗಿದೆ. ಐಟಿ ಅಧಿಕಾರಿಗಳ ಮುಂದೆ ಎ2 ಆರೋಪಿ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ.
ಕೃಷಿ ಮತ್ತು ಪಶು ಸಂಗೋಪನೆಯಿಂದ ಈ ಹಣ ಬಂದಿದ್ದಾಗಿ ದರ್ಶನ್ ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ ಈ ಹಣಕ್ಕೆ ನನ್ನ ಬಳಿ ದಾಖಲೆಗಳು ಇಲ್ಲ. ಈ ಬಗ್ಗೆ ಐಟಿ ರಿಟರ್ನ್ಸ್ ವೇಳೆ ಮಾಹಿತಿ ನೀಡುತ್ತೇನೆ ಎಂದಿದ್ದಾರೆ.
ಸಾಲ ಕೊಟ್ಟಿದ್ದು, ಸಾಲ ಪಡೆದಿದ್ದರ ಬಗ್ಗೆ ಪ್ರಶ್ನೆಗೆ ಉತ್ತರಿಸಿದ್ದಾರೆ. ಮೋಹನ್ ರಾಜ್‌ಗೆ ಸಾಲವಾಗಿ ಹಣ ನೀಡಿದ್ದೆ. 2024 ಫೆಬ್ರವರಿಯಲ್ಲಿ ಸಾಲ ಕೊಟ್ಟು ಮೇನಲ್ಲಿ ವಾಪಸ್ ಪಡೆದಿದ್ದೆ. 3 ವರ್ಷದಿಂದ ಕೃಷಿಗೆ 25 ಲಕ್ಷ ರೂಪಾಯಿ ಮತ್ತು ಹುಟ್ಟುಹಬ್ಬಕ್ಕೆ ಗಿಫ್ಟ್ ರೂಪದಲ್ಲಿ 15 ಲಕ್ಷ ರೂ. ಹಣ ಪಡೆದಿದ್ದಾಗಿ ಹೇಳಿಕೆ ನೀಡಿದರು.
ಈ ಹಣಕ್ಕೆ ನನ್ನ ಬಳಿ ಯಾವುದೇ ದಾಖಲೆ ಇಲ್ಲ. ಮೋಹನ್ ರಾಜ್‌ಗೆ ಬಿಟ್ಟರೆ ಯಾರಿಗೂ ನಗದು ರೂಪದಲ್ಲಿ ಸಾಲ ಕೊಟ್ಟಿಲ್ಲ. ಆರು ವರ್ಷದಿಂದ ನಾನು ಸಾಲ ಕೊಟ್ಟಿಲ್ಲ ಪಡೆದೂ ಇಲ್ಲ. ಉಳಿದ ಹಣದ ಬಗೆ ಮಾಹಿತಿ ಗೊತಿಲ್ಲ ಎಂದು ದರ್ಶನ್ ಹೇಳಿದ್ದಾರೆ.




