ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ
ಬೆಂಗಳೂರು: ಅಖಿಲ ಕರ್ನಾಟಕ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟದ ಗೌರವಾಧ್ಯಕ್ಷ ಎನ್.ಆರ್.ರಮೇಶ್ ನೇತೃತ್ವದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮಡೆನೂರು ಮನು ನಿಷೇಧಿಸಬೇಕು ಎಂಬ ಮನವಿಯನ್ನು ಸಲ್ಲಿಸಲಾಯಿತು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಹ್ಯಾಟ್ರಿಕ್ ಹಿರೋ ಡಾ.ಶಿವರಾಜ್ ಕುಮಾರ್ ರವರು ಮತ್ತು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರವರ ಕುರಿತು ಕೀಳುಮಟ್ಟದ ಮಾತನಾಡಿರುವ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ನಟಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಲನಚಿತ್ರದ ನಟ ಮಡೆನೂರು ಮನು ಅವರನ್ನು ಚಲನಚಿತ್ರರಂಗದಿಂದ ನಿಷೇಧಿಸುವಂತೆ, ಉಗ್ರ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮತ್ತು ನಿರ್ಮಾಪಕ ಸಂಘಕ್ಕೆ ಅಖಿಲ ಕರ್ನಾಟಕ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟ(ರಿ)ರಾಜ್ಯ ಗೌರವಾಧ್ಯಕ್ಷ ಎನ್.ಆರ್.ರಮೇಶ್ ಮನವಿ ಪತ್ರ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಎನ್.ಆರ್.ರಮೇಶ್, ಮಾತನಾಡಿ ಕನ್ನಡ ನೆಲ, ಜಲ, ಭಾಷೆಗೆ ಅಪೂರ್ವವಾದ ಕೊಡುಗೆ ನೀಡಿರುವ ಡೊಡ್ಮನೆ ಕುಟುಂಬ ಎಂಬ ಖ್ಯಾತಿ ಇರುವ ಕರ್ನಾಟಕ ರತ್ನ ಪದ್ಮಭೂಷಣ ಡಾ.ರಾಜ್ ಕುಮಾರ್ ರವರು, ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ರವರು, ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರು ಕಲಾ ಪ್ರೋತ್ಸಾಹಕರು ಎಂದರು.
ಡಾ.ಶಿವರಾಜ್ ಕುಮಾರ್ ರವರು ಭಾರತೀಯ ಚಲನಚಿತ್ರರಂಗದ ಅದ್ಬುತ ನಟ. ಯುವ ನಟರು, ಕಲಾವಿದರಿಗೆ ಪ್ರೋತ್ಸಾಹ, ಸಹಕಾರ ನೀಡುತ್ತಾ, ಕನ್ನಡ ಚಲನಚಿತ್ರ ರಂಗದ ಶ್ರೇಯೋಭಿವೃದ್ಧಿಗಾಗಿ ಸದಾ ಸ್ಪಂದಿಸುತ್ತಿರುವ ಡಾ.ಶಿವರಾಜ್ ಕುಮಾರ್ ರವರು ಇಡೀ ನಾಡಿನ ಜನರ ಪಾಲಿಗೆ ಶಿವಣ್ಣರಾಗಿದ್ದಾರೆ ಎಂದರು.
ಇತ್ತೀಚೆಗೆ ಆಡಿಯೊದಲ್ಲಿ ಮಡೆನೂರು ಮನು ಎಂಬ ನಟ ಇನ್ನೂಬ್ಬರ ಸಾವಿನಲ್ಲಿ ತನ್ನ ಯಶಸ್ಸು ಬಯಸಿರುವ ವಿಚ್ಚಿದ್ರಕಾರಿ ಮನಸ್ಥಿತಿವುಳ್ಳ ಇಂತಹ ವ್ಯಕ್ತಿ ಕನ್ನಡ ಚಲನಚಿತ್ರರಂಗಕ್ಕೆ ಕಪ್ಪುಚುಕ್ಕೆ ಎಂದರು.
ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ನಿರ್ಮಾಪಕರ ಸಂಘ ಮಡೆನೂರು ಮನು ಚಿತ್ರರಂಗದಿಂದ ನಿಷೇಧಿಸಬೇಕು ಮತ್ತು ಅವರ ಮೇಲೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದರು.
ಚಲನಚಿತ್ರ ನಟ ಕಮಲ್ ಹಾಸನ್ ರವರಿಗೆ ಕನ್ನಡ ಭಾಷೆಯ ಕುರಿತು ಅರಿವು ಇಲ್ಲ. ಕನ್ನಡ ಭಾಷೆಗೆ 2500 ವರ್ಷಗಳ ಇತಿಹಾಸವಿದೆ. ಮುಂದಿನ ತಿಂಗಳು ಕಮಲ್ ಹಾಸನ್ ರವರು ಕೊಡಲೆ ಕ್ಷಮಾಪಣೆ ಕೇಳಬೇಕು. ಇಲ್ಲದೇ ಹೋದರೆ ಅವರು ನಟಿಸಿದ ಚಿತ್ರ ಬಿಡುಗಡೆ ಮಾಡಲು ಬಿಡುವುದಿಲ್ಲ. ವಾಣಿಜ್ಯ ಮಂಡಳಿ ಈ ಎರಡು ವಿಷಯ ಕುರಿತು ಕೂಡಲೇ ಕ್ರಮ ವಹಿಸಬೇಕು ಎಂಬ ಮನವಿ ಸಲ್ಲಿಸಲಾಗುತ್ತಿದೆ ಎಂದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು ಮಾತನಾಡಿ, ಮಡೆನೂರು ಮನು ಅವರಿಗೆ ಚಲನಚಿತ್ರ, ರಿಯಾಲಿಟಿ ಶೋಗಳಲ್ಲಿ ಅವಕಾಶ ನೀಡಬಾರದು ಎಂದು ಚಿತ್ರಕ್ಕೆ ಸಂಬಂಧಪಟ್ಟ ಸಂಘ ಸಂಸ್ಥೆಗಳಿಗೆ ತಿಳಿಸಲಾಗಿದೆ ಎಂದರು.
ವಾಣಿಜ್ಯ ಮಂಡಳಿ ಕಾರ್ಯದರ್ಶಿ ರಾಮಕೃಷ್ಣ, ನಿರ್ಮಾಪಕ ಸಂಘದ ಉಮೇಶ್ ಬಣಕಾರ್, ಬಿಬಿಎಂಪಿ ಮಾಜಿ ಸದಸ್ಯ ಡಾ.ಎಸ್.ರಾಜು, ಡಾ.ರಾಜ್ ಕುಮಾರ್ ಮತ್ತು ಡಾ.ಶಿವರಾಜ್ ಕುಮಾರ್ ಅವರ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.



