ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ವಶಕ್ಕೆ ಪಡೆದಿರುವ ರನ್ಯಾ ರಾವ್ ಅವರನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅವರು ಸುದೀಪ್ ನಟನೆಯ ‘ಮಾಣಿಕ್ಯ’ ಸಿನಿಮಾದಲ್ಲಿ ನಟಿಸಿದ್ದರು.
ರನ್ಯಾ ರಾವ್ ಪೊಲೀಸ್ ಮಹಾ ನಿರ್ದೇಶಕ ( ಡಿಜಿಪಿ) ರಾಮಚಂದ್ರ ರಾವ್ ಸಂಬಂಧಿಯಾಗಿದ್ದಾರೆ. ಅವರು ದುಬೈನಿಂದ, ನಗರಕ್ಕೆ ನಿನ್ನೆ ರಾತ್ರಿ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್ಪೋರ್ಟ್ ಕಸ್ಟಮ್ಸ್ ನ ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿದೇಶದಿಂದ ದೆಹಲಿ ಮೂಲಕ ಚಿನ್ನ ಸಾಗಾಣಿಕೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ರನ್ಯಾ ವಶಕ್ಕೆ ಪಡೆದು ವಿಚಾರಣೆ ಕೈಗೊಳ್ಳಲಾಗಿದೆ.
ಇನ್ನೂ ಬಂಧಿತ ಐಪಿಎಸ್ ಅಧಿಕಾರಿ ಸಂಬಂಧಿಯ ಎಸ್ಕಾರ್ಟ್‌ಗೆ ಬಂದಿದ್ದ ಪೊಲೀಸರನ್ನೂ ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನೀವು ಸ್ಮಗ್ಲಿಂಗ್‌ಗೆ ಸಹಾಯ ಮಾಡುತ್ತಿದ್ದೀರಿ ಎಂದು ಹೇಳಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ.
ರನ್ಯಾ ಜನಿಸಿದ್ದು 1991ರಲ್ಲಿ. ಅವರು ಮೂಲತಃ ಚಿಕ್ಕಮಗಳೂರಿನವರು. ನಟನಾ ವೃತ್ತಿ ಆರಂಭಿಸಲು ಬೆಂಗಳೂರಿಗೆ ಬಂದರು. 2014ರಲ್ಲಿ ಸುದೀಪ್ ನಟನೆಯ ‘ಮಾಣಿಕ್ಯ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಈ ಚಿತ್ರದಲ್ಲಿ ಮಾನಸ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡರು. 2016ರಲ್ಲಿ ತಮಿಳಿನ ಸಿನಿಮಾ ಒಂದರಲ್ಲಿ ಅಭಿನಯಿಸಿದ್ದಾರೆ. ಆದರೆ, ಆ ಚಿತ್ರ ಬಾಕ್ಸ್ ಆಫೀಸಲ್ಲಿ ಅಷ್ಟಾಗಿ ಗೆಲುವು ತಂದುಕೊಡಲಿಲ್ಲ.
2017ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಪಟಾಕಿ’ ಸಿನಿಮಾದಲ್ಲಿ ಸಂಗೀತಾ ಹೆಸರಿನ ಪಾತ್ರ ಮಾಡಿದರು. ಆ ಬಳಿಕ ಅವರಿಗೆ ಅಷ್ಟಾಗಿ ಆಫರ್ ಗಳು ಬರಲೇ ಇಲ್ಲ. ಆ ಬಳಿಕ ಅವರು ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿರಲಿಲ್ಲ. ಈಗ ಅವರು ಅಕ್ರಮ ಚಿನ್ನ ಸಾಗಣೆ ಮಾಡಿದ ಆರೋಪದಲ್ಲಿ ಸುದ್ದಿಯಾಗಿದ್ದಾರೆ.



