ಬೆಂಗಳೂರು: ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿರುವ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಯಾವುದೂ ಇಲ್ಲ. ಕಾಂಗ್ರೆಸ್ ಸರ್ಕಾರದ ಕಳಪೆ ಸಾಧನೆ ಇದರಿಂದ ಬಿಂಬಿತವಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಬಜೆಟ್ ಅಧಿವೇಶನದ ರಾಜ್ಯಪಾಲರ ಜಂಟಿ ಅಧಿವೇಶನದ ಭಾಷಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಂಪ್ರದಾಯದಂತೆ ರಾಜ್ಯಪಾಲರು ಭಾಷಣ ಮಾಡಿದ್ದಾರೆ. ರಾಜ್ಯ ಸರ್ಕಾರ ರಚನೆಯಾದ ದಿನದಿಂದ ಗ್ಯಾರಂಟಿ ವಿಷಯವನ್ನೇ ಪ್ರಸ್ತಾಪಿಸುತ್ತಿದ್ದಾರೆ. ರಾಜ್ಯಪಾಲರ ಭಾಷಣದಲ್ಲೂ ಅದೇ ವಿಚಾರ ಪ್ರಸ್ತಾಪವಾಗಿದೆ ಎಂದರು.
ಮೇಕೆದಾಟು ಯೋಜನೆ ನಿಂತಲ್ಲೇ ನಿಂತಿದೆ. ನೀರಾವರಿ ಯೋಜನೆಗಳ ಬಗ್ಗೆ ಪ್ರಸ್ತಾಪವಿಲ್ಲ. ಅಭಿವೃದ್ದಿಗೆ ಪೂರಕ ಕಾರ್ಯಕ್ರಮಗಳನ್ನು ಕೊಟ್ಟಿಲ್ಲ. ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ್ದಾರೆ ಎಂದರು.



