ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ
ಬಳ್ಳಾರಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ತಿಳಿಸಿದ್ದಾರೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ 2024-25 ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ಗೆ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿಗೆ ರೂ.1 ಲಕ್ಷ ಒಳಗಿರಬೇಕು.
ವಿದ್ಯಾರ್ಥಿಗಳು https://shp.karnataka.gov.in ಅನ್ನು ಸಂಪರ್ಕಿಸಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.



