ಬೆಂಗಳೂರು: ಮುರುಘಾ ಮಠದಲ್ಲಿ ನಡೆದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಸದಸ್ಯ ಹಾಗೂ ಹಿರಿಯ ವಕೀಲ ಶಂಕರಪ್ಪ ಅವರು ಪಕ್ಷದ ನಿಲುಮೆಗೆ ಹಾಗೂ ಧೋರಣೆಗೆ ವಿರುದ್ಧವಾಗಿ ನಡೆದುಕೊಂಡ ಕಾರಣದಿಂದ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಕರ್ನಾಟಕ ರಾಜ್ಯ ಸಮಿತಿಯು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದೆ ಎಂದು ಸಿಪಿಐಎಂ ಕಾರ್ಯದರ್ಶಿ ಯು.ಬಸವರಾಜ ತಿಳಿಸಿದ್ದಾರೆ.




