ಬೆಂಗಳೂರು: ಜಗತ್ತಿನ ಯಾವ ಮುಂದುವರೆದ ರಾಷ್ಟ್ರಗಳೂ ಚುನಾವಣೆಗೆ ಇವಿಎಂ ಯಂತ್ರಗಳನ್ನು ಬಳಸುತ್ತಿಲ್ಲ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಎಕ್ಸ್ ಸಂಸ್ಥೆಯ ಎಲಾನ್ ಮಸ್ಕ್ ಚುನಾವಣೆಗಳಲ್ಲಿ ಇವಿಎಂ ಬಳಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯ, ದೇಶದ ಕೆಲವು ಪ್ರಮುಖ ರಾಜಕೀಯ ಪಕ್ಷಗಳು ಮತ್ತು ನೇತಾರರು ಪ್ರತಿಕ್ರಿಯೆ ನೀಡಿದ್ದು, ಇದರ ಭಾಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ, ತಾಂತ್ರಿಕತೆಯಲ್ಲಿ ಮುಂಚೂಣಿಯಲ್ಲಿರುವ ಜಪಾನ್ ಕೂಡ ಇವಿಎಂ ಬಳಕೆಯಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಕಂಡುಕೊಂಡು 2018ರಿಂದ ಇವಿಎಂ ಬಳಕೆಯನ್ನು ಸ್ಥಗಿತಗೊಳಿಸಿದೆ ಎಂದಿದೆ.
ಜಗತ್ತಿನ ತಂತ್ರಜ್ಞಾನದ ದಿಗ್ಗಜರೆಲ್ಲ ಇವಿಎಂ ಬಳಕೆಯಲ್ಲಿ ಭ್ರಷ್ಟಾಚಾರ ಸಾಧ್ಯ ಎನ್ನುವುದನ್ನು ಪ್ರತಿಪಾದಿಸಿದ್ದಾರೆ. ಹೀಗಿದ್ದೂ ಬಿಜೆಪಿ ಹಾಗೂ ಚುನಾವಣಾ ಆಯೋಗ ಇವಿಎಂ ಪರ ವಕಾಲತ್ತು ವಹಿಸುವುದು ನೋಡಿದರೆ ಇದರಲ್ಲಿ ಬಿಜೆಪಿಗೆ ಲಾಭ ಇಲ್ಲದಿರಲು ಸಾಧ್ಯವೇ? ಎಂದು ಪ್ರಶ್ನಿಸಿದೆ.




