ಬೆಳಗಾವಿ: ಸೇನಾ ನೇಮಕಾತಿ ಕಚೇರಿ ಬೆಂಗಳೂರು ಹಾಗೂ ಬೆಳಗಾವಿ ವಲಯದಿಂದ ಅಗ್ನಿವೀರ ಭೂಸೇನೆಯಲ್ಲಿ ನೇಮಕಾತಿಗೆ ಆನ್‌ಲೈನ್ ನೋಂದಣಿ ಆರಂಭಗೊಂಡಿದೆ ಎಂದು ನೇಮಕಾತಿ ವಿಭಾಗದ ಕರ್ನಲ್ ಎ.ಕೆ. ಉಪಾಧ್ಯಾಯ ತಿಳಿಸಿದ್ದಾರೆ.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಬೆಳಗಾವಿ, ಬೀದರ್, ಕಲುಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಅಭ್ಯರ್ಥಿಗಳು ನೋಂದಣಿ ಮಾಡಿಸಬಹುದು. ಅಗ್ನಿವೀರ ಜನರಲ್ ಡ್ಯೂಟಿ, ಅಗ್ನಿವೀರ ಟೆಕ್ನಿಕಲ್, ಅಗ್ನಿವೀರ್, ಟ್ರೇಡ್‌ಮನ್ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಅಗ್ನಿವೀರ್, ಟ್ರೇಡ್‌ಮನ್ ಹುದ್ದೆಗೆ 8ನೇ ತರಗತಿ ಪಾಸ್ ಆಗಿರಬೇಕು. ಅಗ್ನಿವೀರ್ ಕ್ಲರ್ಕ್, ಸ್ಟೋರ್‌ಕೀಪರ್ ಟೆಕ್ನಿಕಲ್ ವಿಭಾಗಗಳಿಗೆ ನೇಮಕಾತಿ ನಡೆಯಲಿದೆ. ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇತರೆ ಮಾಹಿತಿಗಾಗಿ ವೆಬ್‌ಸೈಟ್ ಅಧಿಕೃತ ವೆಬ್ ಸೈಟ್ ವೀಕ್ಷಿಸಬಹುದು.
ಸೇವೆಗೆ ಸೇರಲು ಬಯಸುವವರು ಏಪ್ರಿಲ್ 10ರೊಳಗೆ ಭಾರತೀಯ ಸೇನೆಗೆ www.joinindianarmy.nic.in ವೆಬ್‌ಸೈಟಿನಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು.




