ಬೆಂಗಳೂರು: ತಮ್ಮ ಆಪ್ತಳಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಜೈಲು ಸೇಫ್ ಅಲ್ಲ ಎಂದು ಹೇಳಲಾಗುತ್ತಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಹಲವು ಕುಖ್ಯಾತರು ಖೈದಿಗಳಾಗಿರುವ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಮೇಲೆ ದಾಳಿ ನಡೆಯಬಹುದು ಎಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಭದ್ರತೆ ದೃಷ್ಟಿಯಿಂದ ಬೇರೆ ಜೈಲಿಗೆ ವರ್ಗಾವಣೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ದರ್ಶನ್‌ನನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಲು ಅವಕಾಶ ಕೊಡುವಂತೆ ಎಸ್‌ಪಿಪಿ ಈಗಾಗಲೇ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ. ಬೇರೆ ಜೈಲಿಗೆ ವರ್ಗಾವಣೆ ಮಾಡಲು ಮನವಿ ಮಾಡಿರುವ ಕಾರಣಗಳೆಂದರೆ, ಜನಪ್ರಿಯ ನಟನಾಗಿರುವುದರಿಂದ ಹಲವರು ಪರಿಚಯವಿದ್ದು ಕೈದಿಗಳ ನಡುವೆ ಗಲಾಟೆಯಾಗುವ ಸಾಧ್ಯತೆ ಇದೆ.
ಸಹ ಕೈದಿಗಳು ದರ್ಶನ್ ಮೇಲೆ ಅಟ್ಯಾಕ್ ಮಾಡಬಹುದು. ಪ್ರಕರಣದಲ್ಲಿರುವ ಹಲವು ಆರೋಪಿಗಳಿಗೆ ರೌಡಿ ಕಾಂಟ್ಯಾಕ್ಟ್ ಇರುವ ಹಿನ್ನೆಲೆಯಲ್ಲಿ, ರೌಡಿಗಳ ಮುಖಾಂತರ ಸಾಕ್ಷಿ ನಾಶ ಮಾಡುವಲ್ಲಿ ಯತ್ನಿಸುವ ಸಾಧ್ಯತೆ ಇದೆ.
ಜೊತೆಗೆ ದರ್ಶನ್‌ನನ್ನು ನೋಡಲು ಕೈದಿಗಳಿಂದ ಜೈಲಿನೊಳಗೆ ಹಾಗೂ ಅಭಿಮಾನಿಗಳಿಂದ ಜೈಲಿನ ಹೊರಗೆ ದೊಂಬಿ ಆಗುವ ಸಾಧ್ಯತೆಯೂ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಎಸ್ಪಿಪಿ ಮನವಿ ಸಲ್ಲಿಸಿದ್ದಾರೆ.




