ಬಳ್ಳಾರಿ: ಬಳ್ಳಾರಿ ಮತ್ತು ಕುರುಗೋಡು ತಾಲ್ಲೂಕು ಕೃಷಿಕ ಸಮಾಜದ ತಾಲ್ಲೂಕು ಘಟಕದ ಕಾರ್ಯಕಾರಿ ಸಮಿತಿಗೆ ಚುನಾವಣೆ ಘೋಷಣೆಯಾಗಿದ್ದು, ಡಿ.15ರಂದು ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿ ಹಾಗೂ ಬಳ್ಳಾರಿ ಮತ್ತು ಕುರುಗೋಡು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕ ದಯಾನಂದ ಎಂ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನ.30 ರಿಂದ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಬಳ್ಳಾರಿ ಮತ್ತು ಕುರುಗೋಡು ರೈತ ಸಂಪರ್ಕ ಕೇಂದ್ರಗಳಲ್ಲಿ ನಾಮಪತ್ರ ವಿತರಣೆ ಮಾಡಲಾಗುವುದು.
ಪ್ರತಿ ತಾಲ್ಲೂಕು ಕಾರ್ಯಕಾರಿ ಸಮಿತಿ 15 ಸದಸ್ಯ ಸ್ಥಾನಗಳಿದ್ದು, ಕೃಷಿಕ ಸಮಾಜದ ಅಜೀವ ಸದಸ್ಯರು ತಮ್ಮ ಉಮೇದುವಾರಿಕೆಯ ನಾಮಪತ್ರವನ್ನು 7 ದಿನಗಳ ಮುಂಚಿತವಾಗಿ ರೂ.250 ಠೇವಣಿಯ ಮೂಲ ರಶೀದಿ ಹಾಗೂ ಪಹಣಿಯೊಂದಿಗೆ ಚುನಾವಣಾಧಿಕಾರಿಗೆ ಅರ್ಜಿ ಮೂಲಕ ನಾಮಪತ್ರ ಸಲ್ಲಿಸಬೇಕು.
ನಾಮಪತ್ರ ಸಲ್ಲಿಸಲು ಡಿಸೆಂಬರ್-06 ರ ಬೆಳಿಗ್ಗೆ 11 ರಿಂದ ಸಂಜೆ 3 ರವರೆಗೆ ಸಮಯ ನಿಗದಿಪಡಿಸಲಾಗಿದೆ. ಡಿಸೆಂಬರ್-15 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದೇ ಮತ ಏಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ.8277934294 ಗೆ ಸಂಪರ್ಕಿಸಬಹುದು.




