ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಜೂನ್ ತಿಂಗಳ ಮೊದಲ ಪಾಕ್ಷಿಕದಲ್ಲಿ ಮಳೆಯಾಗುತ್ತಿದ್ದು, ಮುಂಚಿತವಾಗಿ ಬಿತ್ತಿದ ಹೆಸರು, ಉದ್ದು, ಸೋಯಾಅವರೆ, ಶೇಂಗಾ ಮುಂತಾದ ಬೆಳೆಗಳಿಗೆ ಅನುಕೂಲವಾಗಿದೆಯಾದರೂ, ಭೂಮಿಯ ತೇವಾಂಶ ಹೆಚ್ಚಿಗೆ ಆಗಿರುವ ಕಾರಣ ಈಗಾಗಲೇ ಹುಟ್ಟಿರುವ ಸೋಯಾಅವರೆ, ಹೆಸರು ಹಾಗೂ ಉದ್ದಿನ ಬೆಳೆಗಳು ಹಳದಿ ವರ್ಣಕ್ಕೆ ತಿರುಗುವ ಸಾಧ್ಯತೆ ಇರುವುದರಿಂದ ರೈತರು ಮುನ್ನೆಚ್ಚರಿಕೆ ವಹಿಸಬೇಕು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಹಳದಿ ನಂಜಾಣು ರೋಗ ಕಂಡುಬಂದಲ್ಲಿ ರೈತರು ಈ ಕ್ರಮಗಳನ್ನು ಪಾಲಿಸಬೇಕು. ಹೊಲದಲ್ಲಿ, ಒಡ್ಡುಗಳಲ್ಲಿ ನಿಂತಿರುವ ಹೆಚ್ಚುವರಿ ನೀರನ್ನು ಹರಿ ಮಾಡುವುದರ ಮೂಲಕ ನೀರನ್ನು ಹೊರಹಾಕಬೇಕು. ಹೆಸರು, ಉದ್ದು, ಅಲಸಂದಿ, ಸೋಯಾಅವರೆ, ಶೇಂಗಾ ಇತ್ಯಾದಿ ಬೆಳೆಗಳು ಹಳದಿ ವರ್ಣಕ್ಕೆ ತಿರುಗುತ್ತಿದ್ದಲ್ಲಿ, ಎಲೆಗಳ ಮೂಲಕ ನೀರಿನಲ್ಲಿ ಕರಗುವ ರಸಗೊಬ್ಬರಗಳಾದ, 12:61:00, 0:0:50, 13:00:45, 00:52:34, 19:19:19, ಇವುಗಳಲ್ಲಿ ಯಾವುದಾದರೂ ಒಂದನ್ನು ಪ್ರತಿ ಲೀಟರ್ ನೀರಿಗೆ 5 ರಿಂದ 10 ಗ್ರಾಂ. ಬೆರೆಸಿ ಬೆಳೆಗಳ ಮೇಲೆ ಸಿಂಪಡಿಸಬೇಕು.
ಹಳದಿ ನಂಜಾಣು ರೋಗ ಕಂಡುಬಂದಲ್ಲಿ ಅಂತಹ ಬಾಧಿತ ಸಸಿಗಳನ್ನು ಕಿತ್ತು ಒಂದು ಚೀಲದಲ್ಲಿ ತುಂಬಿ ಹೊಲದಿಂದ ಹೊರಗೆ ಹೋಗಿ ಸುಟ್ಟು ಹಾಕಬೇಕು ಇಲ್ಲವೇ ಮಣ್ಣಿನಲ್ಲಿ ಗುಂಡಿ ತೋಡಿ ಹೂಳಬೇಕು. ನೀರು ನಿಂತ ಸನ್ನಿವೇಶದಲ್ಲಿ ಯೂರಿಯಾ ಗೊಬ್ಬರ ಬಳಕೆ ಮಾಡಬಾರದು. ಇದರಿಂದ ರೋಗಗಳ ಬಾಧೆ ಹೆಚ್ಚಾಗುವುದು. ಹದ ಬಂದ ಕೂಡಲೆ ಅಂತರ್ ಬೇಸಾಯ ಕೈಗೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




