ಕರ್ನಾಟಕದಲ್ಲಿ ಒಟ್ಟು ಸುಮಾರು ಒಂದು ಕೋಟಿ 16 ಲಕ್ಷ ಮಕ್ಕಳು ಪ್ರಾಥಮಿಕದಿಂದ ಹಿಡಿದು ಪಿಯುಸಿ ತನಕ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದಾರೆ. ಇವುಗಳಲ್ಲಿ 46 ಲಕ್ಷಕ್ಕೂ ಹೆಚ್ಚು ಮಂದಿ ಸರ್ಕಾರಿ ಶಾಲೆಗಳಲ್ಲಿ ಮತ್ತು ಐವತ್ತು ಏಳು ಲಕ್ಷಕ್ಕೂ ಹೆಚ್ಚಿನ ಮಕ್ಕಳು ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ರಾಜ್ಯದಲ್ಲಿ 74,410 ಶಾಲೆಗಳಿದ್ದು, ಇವುಗಳಲ್ಲಿ 49,679 ಸರ್ಕಾರಿ ಶಾಲೆಗಳು ,7,110 ಅನುದಾನಿತ ಶಾಲೆಗಳು,19,650 ಖಾಸಗಿ ಶಾಲೆಗಳು ಇವೆ. ಇತ್ತೀಚಿನ ವರ್ಷದಲ್ಲಿ ಸರ್ಕಾರಿ ಶಾಲೆಗಳಲ್ಲಿ ಪ್ರವೇಶ 54 ಲಕ್ಷವನ್ನು ದಾಟಿದೆ. ಆದರೆ ಅನುದಾನಿತ ಶಾಲೆಗಳಲ್ಲಿ ಪ್ರವೇಶ ಕುಸಿದಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
2,688 ಅನುದಾನಿತ ಪ್ರಾಥಮಿಕ ಶಾಲೆಗಳಿದ್ದು, ಇವುಗಳಲ್ಲಿ 10,800 ಮಂದಿ ಶಿಕ್ಷಕರಾಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ, 1,600 ಶಿಕ್ಷಕರ ಹುದ್ದೆ ಖಾಲಿ ಇವೆ. ಕನಿಷ್ಠ ಇವರಿಗೆ ತುರ್ತಾಗಿ 2,000 ಹುದ್ದೆಗಳನ್ನು ತುಂಬಬೇಕಾಗಿದೆ.
ಇತ್ತೀಚಿನ ದಶಕಗಳಲ್ಲಿ ಅನುದಾನಿತ ಶಾಲೆಗಳಲ್ಲಿ ನಿವೃತ್ತಿಯಾದ ಹುದ್ದೆಗಳಿಗೆ, ಇಲ್ಲವೇ ನಿಧನರಾದ ಹುದ್ದೆಗಳಿಗೆ ಅಥವಾ ರಾಜೀನಾಮೆ ಕೊಟ್ಟ ಹುದ್ದೆಗಳಿಗೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿಲ್ಲ. ಇದರಿಂದಾಗಿ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ .
ವರ್ಷದಿಂದ ವರ್ಷಕ್ಕೆ ಅನುದಾನಿತ ಶಾಲೆಗಳಿಗೆ ಸಿಬ್ಬಂದಿಯನ್ನು ಕೊಡದೆ, ಅನುದಾನವನ್ನ ಕಡಿತ ಮಾಡಿರುವುದರಿಂದ ಸಾಕಷ್ಟು ಸಾವಿರಾರು ಅನುದಾನಿತ ಶಾಲೆಗಳು ಶಾಶ್ವತವಾಗಿ ಮುಚ್ಚಲ್ಪಟ್ಟಿವೆ. ಅನುದಾನಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದುವವರೆಲ್ಲರೂ ಸಹ ಮಧ್ಯಮ ವರ್ಗದವರು ಮತ್ತು ಬಡವರು ಹಾಗೂ ಕನ್ನಡ ಭಾಷೆಯ ಬಗ್ಗೆ ಆಸಕ್ತಿಯುಳ್ಳವರು. ಅನುದಾನಿತ ಶಾಲೆಗಳ ಮುಚ್ಚುವುದರಿಂದ ಕನ್ನಡ ಭಾಷೆ ಶಿಕ್ಷಣದಲ್ಲಿ ಮಾಯವಾಗುತ್ತಾ ಬರುತ್ತದೆ. ಅನುದಾನಿತ ಶಾಲೆಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದುವ ಇರುತ್ತಿದ್ದರು.
ಶಿಕ್ಷಣ ಕ್ಷೇತ್ರದಲ್ಲಿ ಅನುದಾನಿತ ಶಾಲೆಗಳು ಮತ್ತು ಸರ್ಕಾರಿ ಶಾಲೆಗಳ ಮುಚ್ಚುವುದು ಮತ್ತು ಅಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೆ ಇದರಿಂದ ಶಿಕ್ಷಣದಲ್ಲಿ ಕನ್ನಡಕ್ಕೆ ಅಪಾಯವಾಗುತ್ತದೆ. ಖಾಸಗಿ ಶಾಲೆಗಳಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆಯನ್ನು ಕೊಡುವುದಿಲ್ಲ. ಇದರಿಂದಾಗಿ ಶಿಕ್ಷಣದಲ್ಲಿ ಕನ್ನಡ ಭಾಷೆ ದಿನದಿಂದ ದಿನಕ್ಕೆ ಕಡೆಗಣಿಸಲ್ಪಡುತ್ತದೆ.
ಬಡವರು ಮತ್ತು ನಿರ್ದಿಷ್ಟ ಉದ್ಯೋಗವಿಲ್ಲದ ಜನರಿಗೆ ಸರ್ಕಾರಿ ಶಾಲೆಗಳ ಬಗ್ಗೆ ವಿಶ್ವಾಸವಿಲ್ಲದೆ, ಹೊರೆ ಕಡಿಮೆ ಇರುವ ಅನುದಾನಿತ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುತ್ತಿದ್ದರು. ಈಗ ಅನುದಾನಿತ ಶಾಲೆಗಳು ಮುಚ್ಚುತ್ತಿರುವುದರಿಂದ ಅವರು ಸಾಲವನ್ನು ಮಾಡಿ, ಸಂಕಷ್ಟಕ್ಕೆ ಸಿಲುಕಿ, ತಮ್ಮ ಮಕ್ಕಳನ್ನು ದುಬಾರಿ ಶುಲ್ಕದ ಖಾಸಗಿ ಶಾಲೆಗಳಿಗೆ ಅನಿವಾರ್ಯವಾಗಿ ಸೇರಿಸಬೇಕಾಗಿದೆ. ಇದರಿಂದಾಗಿ ಹಲವಾರು ಪೋಷಕರು ಆರ್ಥಿಕ ಸಮಸ್ಯೆಯಿಂದ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಸಾಧ್ಯವಾಗುತ್ತಿಲ್ಲ. ಕನ್ನಡದ ಬಗ್ಗೆ ಮಾತನಾಡುವ ಸರ್ಕಾರ ಅನುದಾನಿತ ಶಾಲೆಗಳ ಪರಿಸ್ಥಿತಿ ಕೆಟ್ಟು ಅವುಗಳು ಮುಚ್ಚುತ್ತಾ ಹೋದರೆ ಸಮಾಜದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಚಿಂತಿಸಬೇಕಾಗಿದೆ.
ಕನ್ನಡ ಭಾಷೆಯನ್ನು ಅನ್ನದ ಭಾಷೆಯನ್ನಾಗಿ ಮಾಡದ ಹೊರತು ಕನ್ನಡವನ್ನು ಬಹಳಷ್ಟು ಮಂದಿ ಕಲಿಯುವುದಿಲ್ಲ. ಇದರ ಜೊತೆಗೆ ಸರ್ಕಾರಗಳು ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸದೆ, ಅನುದಾನದ ಶಾಲೆಗಳನ್ನು ಸಹಕಾರ ಕೊಡದೆ ಮುಚ್ಚುತ್ತಾ ಬಂದರೆ ಕನ್ನಡದ ಪರಿಸ್ಥಿತಿ ಮುಂದಿನ ಹತ್ತಾರು ವರ್ಷಗಳಲ್ಲಿ ಶಿಕ್ಷಣದಲ್ಲಿ ವಿಶೇಷವಾಗಿ ಏನಾಗಬಹುದು ಎನ್ನುವ ವಿಚಾರವನ್ನು ನೆನಪಿಸಿಕೊಂಡರೆ ಆತಂಕವಾಗುತ್ತದೆ.
– ಕೆ ಎಸ್ ನಾಗರಾಜ್, ಬೆಂಗಳೂರು




