ಬೆಂಗಳೂರು: ‘ನಿಪುಣ ಕಾರ್ಯಕ್ರಮ’ವು ನಿರ್ದಿಷ್ಟವಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಕ್ಲೌಡ್ ಕಂಪ್ಯೂಟಿಂಗ್’ನಂತಹ ಕ್ಷೇತ್ರಗಳಲ್ಲಿ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ನಿಖರವಾದ ಕೌಶಲ್ಯ ವಲಯದೊಂದಿಗೆ ಯುವ ಸಮೂಹವನ್ನು ಸಜ್ಜುಗೊಳಿಸುವ ಗುರಿ ಹೊಂದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ಅವರು ವಿಧಾನಸೌಧದಲ್ಲಿ ಕಾಂಗ್ಸ್ಬರ್ಗ್ ಡಿಜಿಟಲ್ ಅಧ್ಯಕ್ಷರು ಮತ್ತು ಸಿಇಒ ಶೇನ್ ಮೆಕ್ ಆರ್ಡಲ್ ಹಾಗೂ ಕಾಂಗ್ಸ್ಬರ್ಗ್ ಡಿಜಿಟಲ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಾದ ದೀಪಕ್ ಕುಮಾರ್ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆಸಿ ನಿರ್ದಿಷ್ಟ ಕೌಶಲ್ಯ ಅಭಿವೃದ್ಧಿಗಾಗಿ ಯೋಜಿಸಲಾಗಿರುವ ‘ನಿಪುಣ ಕಾರ್ಯಕ್ರಮ’ ಬಳಸಿಕೊಳ್ಳುವಂತೆ ಆಹ್ವಾನ ನೀಡಿದರು.
ನಿಪುಣ ಕಾರ್ಯಕ್ರಮವನ್ನು ನಿರ್ದಿಷ್ಟ ಉದ್ಯಮದ ಅವಶ್ಯಕತೆಗಳನ್ನು ಪರಿಹರಿಸಲು ವಿನ್ಯಾಸಗೊಳಿಸಲಾಗಿದೆ. ಉದ್ಯೋಗಿಗಳ ಬೇಡಿಕೆಗಳನ್ನು ಪೂರೈಸಲು ನಾವು ಕಾಂಗ್ಸ್ಬರ್ಗ್ ಡಿಜಿಟಲ್’ನಂತಹ ಕಂಪನಿಗಳೊಂದಿಗೆ ಸಹಕರಿಸಲು ಸಿದ್ಧರಿದ್ದೇವೆ ಎಂದರು.
ಆವಿಷ್ಕಾರ ಮತ್ತು ಪ್ರತಿಭೆಗಳ ಅಭಿವೃದ್ಧಿಯಲ್ಲಿ ನಾರ್ವೆಯೊಂದಿಗೆ ಪಾಲುದಾರಿಕೆಗೆಗೆ ರಾಜ್ಯವು ಮುಕ್ತ ಮನಸ್ಸಿನಿಂದ ಒಪ್ಪಿದೆ. ಜಾಗತಿಕ ಗುಣಮಟ್ಟವನ್ನು ಪೂರೈಸಲು ಕರ್ನಾಟಕದ ಅತ್ಯುನ್ನತ ಕೌಶಲ್ಯಪೂರ್ಣ ಉದ್ಯೋಗಿಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕಿದೆ, ಈ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದೆ ಎಂದರು.
ಸಭೆಯಲ್ಲಿ ಕರ್ನಾಟಕದ ನವೋದ್ಯಮ ಪರಿಸರ ವ್ಯವಸ್ಥೆಗೆ ಬೆಂಬಲ ನೀಡಲು ಕಂಪನಿಗಳು ಒಪ್ಪಿಗೆ ನೀಡಿದ್ದು ಸಹಭಾಗಿತ್ವ ಹಾಗೂ ಕೌಶಲ್ಯಾಭಿವೃದ್ದಿ ಕಾರ್ಯಕ್ರಮಗಳಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ ಎಂದರು.




