ನಾಯಕತ್ವ ಕುರಿತು ಉಂಟಾಗಿದ್ದ ಎಲ್ಲ ಗೊಂದಲಗಳು ಇತ್ಯರ್ಥ: ಜಿ ಪರಮೇಶ್ವರ್

1 year ago

ಮೈಸೂರು: ನಾಯಕತ್ವ ಕುರಿತಾಗಿ ಉಂಟಾಗಿದ್ದ ಎಲ್ಲ ಗೊಂದಲಗಳು ಇತ್ಯರ್ಥಗೊಂಡಿವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡ ದೇವತೆ, ಚಾಮುಂಡೇಶ್ವರಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಈ ಅವಧಿಯಲ್ಲಿ ಮತ್ತೊಬ್ಬ ಮುಖ್ಯಮಂತ್ರಿ ಬರುತ್ತಾರೆ ಎಂಬ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ ಎಂದರು.

ಹೈಕಮಾಂಡ್ ಅಧಿಕಾರದ ಹಂಚಿಕೆ ಒಪ್ಪಂದದ ವಿಚಾರ ನಮ್ಮ ಗಮನಕ್ಕೆ ತಂದು ಮಾಡಿದ್ದರೆ ಇಷ್ಟೆಲ್ಲಾ ಗೊಂದಲಗಳು ಆಗುತ್ತಿರಲಿಲ್ಲ ಎಂದರು.

ಅವರವರೇ ಚರ್ಚೆಗಳು ಮಾಡಿ ನಿರ್ಧಾರ ಮಾಡಿಕೊಂಡಿದ್ದರು. ಹೀಗಾಗಿ ಈ ಗೊಂದಲಗಳು ಸೃಷ್ಟಿಯಾದವು. ಈಗ ಗೊಂದಲಗಳು ಬಗೆಹರಿದಂತೆ ಕಾಣುತ್ತಿದೆ. ಈ ವಿಚಾರದಲ್ಲಿ ಅಭಿಪ್ರಾಯ ಹೇಳಲು ಹಿರಿಯರು ಕಿರಿಯರು ಎಂಬುದು ಇರುವುದಿಲ್ಲ ಎಂದರು.

ಐದು ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಅವರು ಈ ಹಿಂದೆಯೂ ಹೇಳಿದ್ದರು, ಈಗಲೂ ಅದನ್ನೇ ಹೇಳಿದ್ದಾರೆ. ಮತ್ತೊಬ್ಬರಿಗೆ ಅವಕಾಶ ಇದೆಯೂ ಎಲ್ಲವೋ ಎಂಬುದು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.

Leave a Reply