ರಾಜ್ಯ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹೊಸಪೇಟೆಯಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಹಾಗು ಬೃಹತ್ ಸಮಾವೇಶ ಹಮ್ಮಿಕೊಂಡಿರುವುದು ಈಗಾಗಲೇ ತಮಗೆ ತಿಳಿದಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ (ಮುನ್ಸಿಪಲ್ ಮೈದಾನ) ದಿನಾಂಕ 20-05-2025 ರಂದು ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರು, ಲೋಕಸಭೆ ವಿರೋಧಪಕ್ಷದ ನಾಯಕರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಹಟ್ಟಿ, ಹಾಡಿ, ತಾಂಡ, ಪಾಳ್ಯ, ಮಜುರೆ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಅಲ್ಲಿ ವಾಸಿಸುತ್ತಿರುವ ಸುಮಾರು ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಸಲುವಾಗಿ ತಾವುಗಳು ಈ ಕೆಳಗೆ ನಿಯೋಜಿಸಲಾದ ವಿಧಾನಸಭೆ ಕ್ಷೇತ್ರಕ್ಕೆ ತೆರಳಿ ದಿನಾಂಕ 15-05-2025ರ ಒಳಗಾಗಿ ಸಂಬಂಧಿಸಿದ ವಿಧಾನಸಭೆ ಕ್ಷೇತ್ರದ ಸ್ಥಳೀಯ ಮುಖಂಡರ ಸಭೆಯನ್ನು ಆಯೋಜಿಸಿ ಸದರಿ ಸಮಾವೇಶವನ್ನು ಯಶಸ್ವಿಗೊಳಿಸಲು ಎಲ್ಲ ರೀತಿಯಲ್ಲಿ ಕಾರ್ಯೋನ್ಮುಖರಾಗಲು ಈ ಮೂಲಕ ಕೋರುತ್ತೇನೆ.
ಹಾಗೆಯೇ ಮೇಲ್ಕಂಡ ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಸ್ಥಳೀಯ ಅಧಿಕಾರಿಗಳ ಸಭೆಯನ್ನು ಕರೆದು, ಹಕ್ಕುಪತ್ರ ನೀಡುವ ಕಾರ್ಯಕ್ರಮ ಹಾಗೂ ಈ ಸಮಾವೇಶ ಯಶಸ್ವಿಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ ಎಲ್ಲ ರೀತಿಯ ಸಹಕಾರ ನೀಡಲು ಸೂಚನೆ ನೀಡುವಂತೆ ಕೋರುತ್ತೇನೆ.
– ಡಿ ಕೆ ಶಿವಕುಮಾರ್, ಡಿಸಿಎಂ




