ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ರಾಜ್ಯದಲ್ಲಿ ಅಗತ್ಯವಿರುವಷ್ಟು ವಿದ್ಯುತ್ ಪೂರೈಕೆಗೆ ಎಲ್ಲಾ ಕ್ರಮ ಕೈಗೊಂಡಿದ್ದು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಅಗತ್ಯ ಬೀಳುವುದಿಲ್ಲ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ನ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ 2024-25 ರಲ್ಲಿ ಅಂದಾಜಿಸಲಾದ ವಿದ್ಯುತ್ ಬಳಕೆಯ ಬೇಡಿಕೆಯ ಪ್ರಮಾಣ 92082 ಮಿಲಿಯನ್ ಯೂನಿಟ್ ಇದೆ ಏಪ್ರಿಲ್-24 ರಿಂದ ಡಿಸೆಂಬರ್-24 ರ ಅಂತ್ಯದವರೆಗೆ (ಸರಾಸರಿ ದಿನವಹಿ ಬಳಕೆ) 235 ಮಿಲಿಯನ್ ಯೂನಿಟ್ ಗಳಾಗಿರುತ್ತದೆ ಎಂದರು.
ರಾಜ್ಯ ಈಗಾಗಲೇ 18,365 ಮೆಗಾವ್ಯಾಟ್‌ನ ಗರಿಷ್ಠ ಬೇಡಿಕೆಯನ್ನು ಪೂರೈಸಿದ್ದು, ಈ ಪ್ರಮಾಣವು 19,000 ಮೆಗಾವ್ಯಾಟ್ ಗೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದರು.
ಜಲ, ಶಾಖೋತ್ಪನ್ನ, ಪವನ, ಸೌರ, ಕೇಂದ್ರ ಸರ್ಕಾರಿ ಸ್ವಾಮ್ಯದ ವಿದ್ಯುತ್ ಉತ್ಪಾದನಾ ಘಟಕಗಳಿಂದ ರಾಜ್ಯದ ಪಾಲು ಸೇರಿ 68523.41 ಮಿಲಿಯನ್ ಯೂನಿಟ್ ವಿದ್ಯುತ್ ರಾಜ್ಯಕ್ಕೆ ದೊರೆಯುತ್ತಿದೆ ಎಂದರು.
ರಾಜ್ಯದಲ್ಲಿ ಪ್ರಸ್ತುತ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ರಾಜ್ಯದಲ್ಲಿ ಉತ್ಪಾದನೆಯು ಕಡಿಮಯಾದಲ್ಲಿ ಬ್ಯಾಂಕಿಂಗ್ ಸಿಸ್ಟಮ್ ನಲ್ಲಿ / ಮುಕ್ತ ಮಾರುಕಟ್ಟೆಯಲ್ಲಿ ವಿದ್ಯುತ್‌ನ್ನು ಪಡೆದು ಪೂರೈಸಲಾಗುತ್ತದೆ ಎಂದರು.
ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ರಾಜ್ಯದ ವಿದ್ಯುತ್ ಜಲಾಶಯಗಳಲ್ಲಿ ನೀರಿನ ಲಭ್ಯತೆಯು ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಉತ್ತಮವಾಗಿದೆ. ಬೇಸಿಗೆಯಲ್ಲಿ ಏರಿಕೆಯಾಗುವ ವಿದ್ಯುತ್ ಬೇಡಿಕೆಯನ್ನು ಗಣನೆಗೆ ತೆಗೆದುಕೊಂಡು ಕೊರತೆ ನೀಗಿಸಲು ವಿದ್ಯುತ್ ವಿನಿಮಯ ಕೇಂದ್ರಗಳಿಂದ ದಿನವಹಿ ಆಧಾರದ ಮೇಲೆ ಬೇಡಿಕೆಗನುಗುಣವಾಗಿ ವಿದ್ಯುತ್ ಖರೀದಿ ಮಾಡಲಾಗುತ್ತಿದೆ ಎಂದರು.
ಉತ್ತರ ಪ್ರದೇಶದಿಂದ 100 ಮೆ.ವ್ಯಾ. ನಿಂದ 1200 ಮೆ.ವ್ಯಾ ವರೆಗೆ ಬೆಳಿಗ್ಗೆ ಮತ್ತು ಸಂಜೆಯ ಪೀಕ್ ವಿದ್ಯುತ್ ಬೇಡಿಕೆಗಾಗಿ ಡಿಸೆಂಬರ್-2024 20 ಪಡೆಯಲಾಗುತ್ತಿದೆ. -20250 ಅಂತ್ಯದವರೆಗೆ ವಿದ್ಯುತ್ ಪಡೆಯಲಾಗಿದೆ ಎಂದರು.
ರಾಜ್ಯದ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ತಾಂತ್ರಿಕ ಸಾಧ್ಯತೆಯಿರುವ ವಿದ್ಯುತ್ ಉಪ ಕೇಂದ್ರಗಳಿಂದ ಹಗಲಿನ ವೇಳೆಯಲ್ಲಿಯೇ ನಿರಂತರ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದೆ ಎಂದರು.
ಅರಣ್ಯ ಪ್ರದೇಶದ ಮೂಲಕ ಹಾದುಹೋಗುವ ಕೃಷಿ ಫೀಡರ್ ಗಳಿಗೆ ಹಗಲಿನ ವೇಳೆಯಲ್ಲಿಯೇ 7 ಗಂಟೆಗಳ ಕಾಲ ನಿರಂತರವಾಗಿ 3 ಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದರು.
ಅನಿವಾರ್ಯ ಸಂದರ್ಭಗಳಲ್ಲಿ, ವಿದ್ಯುತ್ ಜಾಲದಲ್ಲಿ ಅಡಚಣೆಯಾದಾಗ ಮಾತ್ರ ಅಲ್ಪ ಪ್ರಮಾಣದಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ ಬೇಸಿಗೆ ಸಮಯದಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸಭೆಗಳನ್ನು ನಡೆಸಲಾಗಿದ್ದು ಕೆಳಕಂಡಂತೆ ಸೂಚಿಸಲಾಗಿರುತ್ತದೆ ಎಂದರು.
ಸರ್ಕಾರದ ಆದೇಶದಂತೆ, ನೀರಾವರಿ ಪಂಪ್ ಸೆಟ್ ಗಳಿಗೆ ನಿಗದಿ ಅವಧಿಯಂತೆ ವಿದ್ಯುತ್ ಪೂರೈಕೆಯನ್ನು ನಿಯಂತ್ರಿಸುವುದು ಮತ್ತು ಸೋಲಾರ್ ಯೋಜನೆಗಳನ್ನು ಶೀಘ್ರವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.




