ಬೆಂಗಳೂರು: ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಎಲ್ಲಾ ಪಕ್ಷಗಳು ಸಂಪೂರ್ಣ ಬೆಂಬಲ ನೀಡಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರಿಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕೂಡ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಇದು ನಮ್ಮೆಲ್ಲರ ಒತ್ತಾಯವಾಗಿದೆ ಎಂದರು.
ಈಗಾಗಲೇ ನಾವು ಅವರಿಗೆ ಸಂಪೂರ್ಣ ಅಧಿಕಾರ ಕೊಟ್ಟಿದ್ದೇವೆ. ಜನರ ಅನಿಸಿಕೆ ಹಾಗೂ ದೇಶದಲ್ಲಿ ಇರುವ ಭಾವನೆ ಜೊತೆಗೆ ಎಲ್ಲಾ ಪಕ್ಷಗಳು ಅವರಿಗೆ ಅಧಿಕಾರ ನೀಡಿದ್ದೇವೆ. ಪಾಕಿಸ್ತಾನದ ವಿರುದ್ಧ ಕಾರ್ಯಾಚರಣೆ ಅಧಿಕಾರ ಮಾಡಲು ಕೊಟ್ಟಿದ್ದೇವೆ. ಅದನ್ನು ಅವರು ಉಪಯೋಗ ಮಾಡಿಕೊಳ್ಳಲಿ, ತಮ್ಮ ಕೆಲಸವನ್ನು ಅವರು ಮಾಡಲಿ. ದೇಶದ ರಕ್ಷಣೆ ಮಾಡುವುದಕ್ಕೆ ಆದಷ್ಟು ಬೇಗನೆ ಒಳ್ಳೆಯ ಹೆಜ್ಜೆಯನ್ನು ಇಡಬೇಕು ಎಂದರು.
ಪ್ರಧಾನಿ ಭಾವಚಿತ್ರವನ್ನು ವಿರೂಪಗೊಳಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್ ಟೀಕೆಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ವ್ಯಕ್ತಿಗೆ, ಯಾರೇ ಇರಲಿ, ಅದು ಪ್ರಧಾನಮಂತ್ರಿಯೇ ಇರಲಿ, ಯಾವುದೇ ಮುಖಂಡರಿಗೇ ಇರಲಿ, ಅವರ ಗೌರವಕ್ಕೆ ಧಕ್ಕೆ ತರುವಂತ ಕೆಲಸ ಮಾಡಬಾರದು. ಅವರಾಗಲಿ ನಮ್ಮವರೇ ಆಗಲಿ ಈ ರೀತಿ ಮಾಡೋದು ಸರಿಯಲ್ಲ ಎಂದರು.
ಉಗ್ರರ ವಿರುದ್ಧ ಸಮರ ಹಾಗೂ ಪಾಕಿಸ್ತಾನ ವಿರುದ್ಧದ ಕ್ರಮದ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಕೈಗೊಂಡಿರುವ ನಿರ್ಣಯಕ್ಕೆ ಎಲ್ಲರೂ ಬದ್ಧರಾಗಬೇಕು. ಈ ಕುರಿತಂತೆ ಪಕ್ಷದ ಎಲ್ಲರಿಗೂ ಸುತ್ತೋಲೆಯ ಮೂಲಕ ಸ್ಪಷ್ಟನೆ ಕಳುಹಿಸಲಾಗಿದೆ. ಅದನ್ನು ಮೀರಿ ಯಾರಾದರೂ ನಿಲುವು ಪ್ರಕಟಿಸಿದರೆ ಅವರ ವಿರುದ್ಧ ಪಕ್ಷ ಕ್ರಮ ಜರುಗಿಸಲಿದೆ ಎಂದು ಎಚ್ಚರಿಕೆ ನೀಡಿದರು.




