ಬೆಂಗಳೂರು: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಗೃಹಕಚೇರಿ ಕೃಷ್ಣಾದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ನೀರು ಬಿಡುವಂತೆ ನೀಡಿರುವ ಆದೇಶದ ಕುರಿತು ಸಂಪುಟ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿ, ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈವರೆಗೆ ಶೇ. 28ರಷ್ಟು ಒಳಹರಿವಿನ ಕೊರತೆ ಇದೆ ಎಂದು ಸಿ.ಡಬ್ಲ್ಯೂ.ಆರ್.ಸಿ ಗೆ ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು ಎಂದರು.
ಜೊತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ ಸಿ.ಡಬ್ಲ್ಯೂ.ಆರ್.ಸಿ ಅವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ ಎಂದರು.
ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಗಿದೆ. ಜೊತೆಗೆ ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದರು.
ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನಿಸಲಾಗುವುದು ಎಂದರು.
ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎಂಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅoತ್ಯದವರೆಗೆ ಕಾಯಲು ಮನವಿ ಮಾಡಿದ್ದೇವೆ. ಆದರೆ ತೀರ್ಪಿನಲ್ಲಿ ನಮ್ಮ ಮನವಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದರು.




