ನೀರು ಹಂಚಿಕೆ ವಿವಾದ ಕುರಿತು ಚರ್ಚಿಸಲು ಸರ್ವಪಕ್ಷಗಳ ಸಭೆ: ಡಿ.ಕೆ.ಶಿವಕುಮಾರ್

3 years ago

#Allparty #meeting #discuss #water #sharing #dispute #DKShivakumar

ಬೆಂಗಳೂರು: ಕಾವೇರಿ, ಮಹದಾಯಿ, ಕೃಷ್ಣಾ ಮತ್ತಿತರ ಜಲವಿವಾದ, ರಾಜ್ಯದ ಅಣೆಕಟ್ಟೆಗಳಲ್ಲಿ ನೀರು ಪರಿಸ್ಥಿತಿ,ಹಾಗೂ ಕಾಮಗಾರಿಗಳು ಕುರಿತು ಚರ್ಚಿಸಲು ಬುಧವಾರ ಸರ್ವಪಕ್ಷಗಳ ಮುಖಂಡರ ಸಭೆ ಕರೆಯಲಾಗಿದೆ. ಸುದ್ದಿಗಾಗರಿಗೆ ಈ ವಿಷಯ ತಿಳಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಸಭೆಗೆ ಬರುವಂತೆ ಕೆಲವು ಸಂಸದರಿಗೂ ಹಾಗೂ ನೀರಾವರಿ, ಕಾನೂನು ತಜ್ಞರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಜಲಾಶಯಗಳ ನೀರಿನ ಸಂಗ್ರಹ ಕಡಿಮೆಯಾಗಿದ್ದು ಸಂಕಷ್ಟ ಪರಿಸ್ಥಿತಿ ಇದೆ. ಹೀಗಾಗಿ ಕರ್ನಾಟಕ ರಾಜ್ಯ ಹಾಗೂ ರೈತರ ಹಿತ ಕಾಯುವುದು ನಮ್ಮ ಕರ್ತವ್ಯ. ಎಲ್ಲಾ ಅಣೆಕಟ್ಟುಗಳಲ್ಲೂ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಸಂಕಷ್ಟ ಪರಿಸ್ಥಿತಿ ತಲೆದೋರಿದೆ ಎಂದರು.

ಕಾವೇರಿ ನೀರು ಹಂಚಿಕೆ ಕುರಿತಾಗಿ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಮನವಿ ಸಲ್ಲಿಸುತ್ತಿದ್ದೇವೆ. ಈಗಾಗಲೇ ನೀರು ಹರಿಸುವ ನಿರ್ಧಾರ ಮರು ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಮಾಡಿದ್ದೇವೆ. ನಾವು ರೈತರ ಹಿತವನ್ನು ಕಾಯಬೇಕು. ಕೋರ್ಟ್ ನಿರ್ಧಾರಕ್ಕೂ ಆದ್ಯತೆ ನೀಡಬೇಕು ಎಂದು ಹೇಳಿದರು.

ಬಿಜೆಪಿ ಹಾಗೂ ದಳದ ಸ್ನೇಹಿತರು ಈ ವಿಚಾರದಲ್ಲಿ ರಾಜಕೀಯ ಮಾಡಲು ಮುಂದಾಗಿದ್ದಾರೆ. ಅವರಿಗೆ ತಮ್ಮ ಕಾಲದಲ್ಲಿ ಏನಾಗಿತ್ತು ಎಂಬ ಅರಿವಿಲ್ಲವಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದೇ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದರು.

ರೈತ ನಾಯಕರುಗಳ ಅಸಮಾಧಾನವನ್ನು ನಾವು ಗೌರವಿಸುತ್ತೇವೆ. ಅದರ ಪರಿಸ್ಥಿತಿಯನ್ನೂ ಅರ್ಥ ಮಾಡಿಕೊಳ್ಳಬೇಕಿದೆ. ಕೆಲವರು ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಮೈಸೂರು-ಬೆಂಗಳೂರು ಹೆದ್ದಾರಿ ತಡೆಯಲು ಮುಂದಾಗಿರುವುದು ತಮ್ಮ ಗಮನದಲ್ಲಿದೆ. ಆ ರಸ್ತೆ ವಿನ್ಯಾಸ ಸರಿಯಿಲ್ಲದೆ ಈಗಾಗಲೇ ಸಾಕಷ್ಟು ಸಾವು-ನೋವುಗಳಾಗಿವೆ. ಬಿಜೆಪಿಯವರು ಯಾವ ಕಾರಣಕ್ಕೆ ರಸ್ತೆ ತಡೆ ನಡೆಸುತ್ತಾರೆ ಎಂದು ಪ್ರಶ್ನಿಸಿದರು.

Leave a Reply