ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ದೊರೆತು ಜೈಲಿನಿಂದ ಬಿಡುಗಡೆ ಆದ ಬಳಿಕ ಇದೇ ಮೊದಲ ಬಾರಿಗೆ ಎಲ್ಲ ಆರೋಪಿಗಳು ನ್ಯಾಯಾಲಯದಲ್ಲಿ ಒಟ್ಟಿಗೆ ಹಾಜರಾದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ನಟ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ವಿನಯ್, ನಾಗರಾಜು ಸೇರಿದಂತೆ ಎಲ್ಲ ಆರೋಪಿಗಳು ಸಿಸಿಎಚ್ 57ರ ಕೋರ್ಟ್ನಲ್ಲಿ ಹಾಜರಾದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ದರ್ಶನ್ ಹಾಗೂ ಪವಿತ್ರಾ ಗೌಡ ಪರಸ್ಪರ ಮುಖಾಮುಖಿಯಾದರು.
ಪವಿತ್ರಾ ಗೌಡ ಹಾಗೂ ಇನ್ನಿತರೆ ಆರೋಪಿಗಳು ತುಸು ಮುಂಚಿತವಾಗಿಯೇ ನ್ಯಾಯಾಲಯಕ್ಕೆ ಬಂದಿದ್ದರು. ಪವಿತ್ರಾ ಗೌಡ ಅವರು ತಮ್ಮ ವಕೀಲರೊಂದಿಗೆ ಚರ್ಚೆ ಮಾಡುತ್ತಾ ನ್ಯಾಯಾಧೀಶರ ಆಗಮನಕ್ಕೆ ಕಾಯುತ್ತಾ ನಿಂತಿದ್ದರು.
ದರ್ಶನ್ ಸ್ವಲ್ಪ ತಡವಾಗಿ ನ್ಯಾಯಾಲಯಕ್ಕೆ ಬಂದರು. ಅವರನ್ನು ಅವರ ಗೆಳೆಯ ಧನ್ವೀರ್ ಗೌಡ ಕಾರಿನಲ್ಲಿ ಕರೆದುಕೊಂಡು ಬಂದರು. ನ್ಯಾಯಾಲಯಕ್ಕೆ ಬಂದ ಬಳಿಕ ದರ್ಶನ್ ಹಾಗೂ ಪವಿತ್ರಾ ಗೌಡ ಪರಸ್ಪರ ಮಾತನಾಡಿದರು.
ದರ್ಶನ್ ಅವರ ಆರೋಗ್ಯವನ್ನು ಪವಿತ್ರಾ ಗೌಡ ವಿಚಾರಿಸಿದರು. ಪವಿತ್ರಾ ಅವರ ಪ್ರಶ್ನೆಗೆ ಉತ್ತರಿಸಿದ ದರ್ಶನ್, ಆ ಬಳಿಕ ಪವಿತ್ರಾ ಅವರ ಆರೋಗ್ಯವನ್ನು ದರ್ಶನ್ ವಿಚಾರಿಸಿದ್ದಲ್ಲದೆ, ಅವರ ಬೆನ್ನು ಸವರಿ ಸಂತೈಸಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ನ್ಯಾಯಾಧೀಶರು ಆಗಮಿಸಿ, ಎಲ್ಲರ ಹಾಜರಿ ಪಡೆದು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿದರು. ಮತ್ತೆ ಮುಂದಿನ ತಿಂಗಳು 25ರಂದು ಎಲ್ಲ ಆರೋಪಿಗಳು ಮತ್ತೊಮ್ಮೆ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.
ಈ ನಡುವೆ ಪವಿತ್ರಾ ಗೌಡ, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ದೇವಾಲಯಕ್ಕೆ ಹೋಗಲು ಅನುಮತಿ ನೀಡುವಂತೆ ಕೋರಿದ್ದಾರೆ. ಪವಿತ್ರಾ ಗೌಡ ಹೊರ ರಾಜ್ಯದ ದೇವಾಲಯವೊಂದಕ್ಕೆ ತೆರಳಬೇಕಿದ್ದು, ಇದಕ್ಕಾಗಿ ನ್ಯಾಯಾಧೀಶರ ಬಳಿ ಅನುಮತಿ ಕೋರಿದ್ದಾರೆ. ಪವಿತ್ರಾ ಅವರಿಗೆ ಅನುಮತಿ ದೊರಕುವ ಸಾಧ್ಯತೆ ಇದೆ.



