ಬೆಂಗಳೂರು: ರಾಜ್ಯದಲ್ಲಿನ 15 ವರ್ಷಕ್ಕಿಂತ ಹಳೆಯ ಎಲ್ಲಾ ರೀತಿಯ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ರಾಜ್ಯ ಸರ್ಕಾರದ ಅಧೀನದಲ್ಲಿರುವ ಇಲಾಖೆ, ನಿಗಮ, ನಗರಸಭೆ, ಮಂಡಳಿಗಳ ವಾಹನಗಳನ್ನು ನಾಶಪಡಿಸಲು ಆದೇಶದಲ್ಲಿ ತಿಳಿಸಲಾಗಿದೆ. ಕೇಂದ್ರದ ಆದೇಶದಂತೆ ರಾಜ್ಯ ಸರ್ಕಾರ ಈ ಸೂಚನೆ ನೀಡಿದೆ.
ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ 5 ಸಾವಿರ ವಾಹನಗಳನ್ನು ನಾಶಪಡಿಸಲು ನಿರ್ದೇಶನ ನೀಡಲಾಗಿದೆ. ರಾಜ್ಯದಲ್ಲಿರುವ ಸ್ಕ್ರಾಪಿಂಗ್ ಘಟಕಗಳಲ್ಲಿ ಸ್ಕ್ರಾಪ್ ಮಾಡಲು ಸರ್ಕಾರದ ಕಾರ್ಯದರ್ಶಿ ಆದೇಶಿಸಿದ್ದಾರೆ.
ಪರಿಸರ ಸಂರಕ್ಷಣೆ ದೃಷ್ಟಿಯಿಂದ ನೋಂದಣಿಯಾಗಿ 15 ವರ್ಷ ಮೇಲ್ಪಟ್ಟ ವಾಹನಗಳನ್ನು ನಾಶ ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು. ಅದರಂತೆ ರಾಜ್ಯ ಸರ್ಕಾರ ತನ್ನ ಅಧೀನ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಹಳೆ ವಾಹನಗಳ ನಾಶಕ್ಕೆ ಮುಂದಾಗಿದೆ.




