ಬೆಳಗಾವಿ: ಕ್ಷೇತ್ರದಲ್ಲಿ ಸಾಕಷ್ಟು ಉದ್ಯಮಗಳಿದ್ದು, ಇದಕ್ಕಾಗಿ ಕ್ಷೇತ್ರದಲ್ಲಿ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ತೋರಣಗಲ್‌ನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮಂಜೂರು ಮಾಡಬೇಕು. ಜೊತೆಗೆ ಆರೋಗ್ಯ ಕ್ಷೇತ್ರ ಅಭಿವೃದ್ಧಿಗೆ ಸಂಡೂರಿನಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು ಮಂಜೂರು ಮಾಡುವಂತೆ ಶಾಸಕಿ ಈ.ಅನ್ನಪೂರ್ಣ ಮನವಿ ಮಾಡಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆ ಕಲಾಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಂಡೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಯಿಂದ 200 ಹಾಸಿಗೆಯ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿದ್ದಕ್ಕೆ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಆದರೆ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರು, ಪ್ರಸೂತಿ ತಜ್ಞರು ಮುಂತಾದ ತಜ್ಞ ವೈದ್ಯರ ಕೊರತೆ ನೀಗಿಸಬೇಕು ಎಂದು ಮನವಿ ಮಾಡಿದರು.
ಕ್ಷೇತ್ರದಲ್ಲಿ ಗಣಿಗಾರಿಕೆ, ಉಕ್ಕು, ಪೇಂಟ್ ಹೀಗೆ ಹಲವು ಕಾರ್ಖಾನೆ, ಉದ್ದಿಮೆಗಳಿವೆ. ಕ್ಷೇತ್ರದ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ತೋರಣಗಲ್‌ನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮಂಜೂರು ಮಾಡಬೇಕು, ಹಾಗೂ ಆರೋಗ್ಯ ಕ್ಷೇತ್ರ ವೃದ್ಧಿಗೆ ಸಂಡೂರು ಪಟ್ಟಣದಲ್ಲಿ ನರ್ಸಿಂಗ್ ಕಾಲೇಜು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.




