ಕರ್ನಾಟಕ ರಾಜ್ಯದ ಮಾನ್ಯ ಗೃಹ ಸಚಿವರು ಇನ್ನು ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಿಗೆ ಸಬ್ ಇನ್ಸ್ಪೆಕ್ಟರ್ಗಳು ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಸಂದರ್ಭದಲ್ಲಿ ಆ ಠಾಣೆಗಳ ಸರಹದ್ದು ಮತ್ತು ಅಲ್ಲಿನ ಅವಶ್ಯಕತೆಗಳನ್ನು ಮಾನದಂಡವನ್ನಾಗಿ ರೂಪಿಸಿ ತದನಂತರ ವರ್ಗಾವಣೆಗಳನ್ನ ಮಾಡಿ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಬೆಂಗಳೂರು ನಗರವು ಸೇರಿದಂತೆ ಹಲವಾರು ಠಾಣೆಗಳಲ್ಲಿ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅದರಲ್ಲೂ ಸಬ್ ಇನ್ಸ್ಪೆಕ್ಟರ್ಗಳ ಸಂಖ್ಯೆ ಹೆಚ್ಚಾಗಿದೆ. ಆದರೆ ಅವರಿಗೆ ಸರಹದ್ದು ಕಡಿಮೆ ಇರುತ್ತದೆ. ಜೊತೆಗೆ ಕೆಲವು ಸ್ಥಳಗಳಲ್ಲಿ ಅಪರಾಧಗಳ ಪ್ರಕರಣವು ಗಣನೀಯ ಪ್ರಮಾಣದಲ್ಲಿ ಇರುವುದಿಲ್ಲ. ಇಲ್ಲಿ ಸಿಬ್ಬಂದಿಗಳ ನಿಯೋಜನೆ ಪ್ರಯೋಜನಕ್ಕೆ ಬರುವುದಿಲ್ಲ. ಬಹಳಷ್ಟು ಠಾಣೆಗಳಲ್ಲಿ ಸಿಬ್ಬಂದಿ ಕೆಲಸವಿಲ್ಲದೆ ಕುಳಿತಿರುತ್ತಾರೆ. ಇದೇ ಸಂದರ್ಭದಲ್ಲಿ ಬಹಳಷ್ಟು ಪೊಲೀಸ್ ಠಾಣೆಗಳ ವ್ಯಾಪ್ತಿ ಬಹಳ ದೊಡ್ಡದಾಗಿದೆ ಮತ್ತು ಅಪರಾಧ ಪ್ರಕರಣಗಳು ಪ್ರದೇಶದಲ್ಲಿ ಹೆಚ್ಚು ಪ್ರಮಾಣದಲ್ಲಿ ದಾಖಲಾಗುತ್ತಿವೆ. ಆದರೆ ಅಲ್ಲಿ ಸಿಬ್ಬಂದಿಯ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಮಾನ್ಯ ಗೃಹ ಸಚಿವರು ಸಂಬಂಧ ಪಟ್ಟಂತಹ ಅಧಿಕಾರಿಗಳಿಗೆ ಸೂಕ್ತವಾದಂತಹ ಮಾರ್ಗದರ್ಶನವನ್ನು ಮಾಡಿ ಅವಶ್ಯಕೆತೆಗೆ ತಕ್ಕ ಹಾಗೆ ಠಾಣೆಗಳಲ್ಲಿ ಸಿಬ್ಬಂದಿಯನ್ನು ಯೋಜಿಸುವಂತಹ ವ್ಯವಸ್ಥೆಯನ್ನು ಮಾಡಿ.
ಕರ್ನಾಟಕ ರಾಜ್ಯದ ಗುಪ್ತಚರ ಇಲಾಖೆಯ ವಿಚಾರದಲ್ಲೂ ಅವರ ಸೂಕ್ಷ್ಮತೆ ಸಮಾಧಾನಕರವಾಗಿಲ್ಲ ಎಂಬುದು ಹಲವಾರು ಘಟನೆಗಳಿಂದ ಸಾಬೀತಾಗುತ್ತಿದೆ. ಈ ಹಿನ್ನೆಲೆಯಲ್ಲೂ ಸಹ ಅಪರಾಧ ಪ್ರಕರಣಗಳನ್ನು ಮುನ್ನವೇ ತಡೆಯುವ ನಿಟ್ಟಿನಲ್ಲಿ ಗುಪ್ತಚರ ಇಲಾಖೆಯನ್ನು ಮತ್ತಷ್ಟು ಆಧುನಿಕ ವ್ಯವಸ್ಥೆಯೊಂದಿಗೆ ಬಲಪಡಿಸಬೇಕು ಮತ್ತು ರಸ್ತೆಗಳಿಗೆ ಹಾಕಿರುವ ಸಿಸಿ ಕ್ಯಾಮೆರಾಗಳಲ್ಲಿ ಚಲನವಲನಗಳ ಬಗ್ಗೆ ಗಮನಹರಿಸಿದರೆ ಸಂಭವಿಸಬಹುದಾದಂತಹ ಅದೆಷ್ಟೋ ಪ್ರಕರಣಗಳನ್ನು ತಡೆಗಟ್ಟಬಹುದು.
– ಕೆ ಎಸ್ ನಾಗರಾಜ್, ಬೆಂಗಳೂರು




