ದಾವಣಗೆರೆ: ನಿಟ್ಟುವಳ್ಳಿ ಶಾಖಾ ಗ್ರಂಥಾಲಯ ಕಟ್ಟಡ ನಿರ್ಮಿಸಲು ಸ್ವಂತ ನಿವೇಶನವನ್ನು ನಗರಾಭಿವೃದ್ಧಿ ಪ್ರಾದಿಕಾರದಿಂದ ಪಡೆಯಲು ಹಾಗೂ ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕರಿಗೆ ವಾಚನಾಲಯ ಪ್ರಾರಂಭಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಅಧ್ಯಕ್ಷರಾದ ಗಂಗಾಧರಸ್ವಾಮಿ ಜಿ,ಎಂ ಅನುಮೋದನೆ ನೀಡಿದರು.
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
ಜಿಲ್ಲಾಡಳಿತ ಭವನದಲ್ಲಿ ನಡೆದ 90ನೇ ನಗರ ಗ್ರಂಥಾಲಯ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಾರ್ಡ್ ನಂ. 19ರ ಶೇಖರಪ್ಪ ನಗರದಲ್ಲಿರುವ ಕೋಳಚೆ ಪ್ರದೇಶದ ಗ್ರಂಥಾಲಯವನ್ನು 14ನೇ ವಾರ್ಡ್ ನಲ್ಲಿರುವ ಮಹಾನಗರ ಪಾಲಿಕೆಯ ವತಿಯಿಂದ ನಿರ್ಮಿಸಲಾದ ಕಟ್ಟಡಕ್ಕೆ ಸ್ಥಳಾಂತರಿಸಿ ಇಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಅಧ್ಯಯನ ಕೇಂದ್ರ ಪ್ರಾರಂಭಿಸಲು ಸೂಚಿಸಿದರು.
ಕೆ.ಎಸ್.ಆರ್.ಟಿ.ಸಿ ಹೊಸ ಬಸ್ ನಿಲ್ದಾಣದಲ್ಲಿ ವಾಚನಾಲಯ ಪ್ರಾರಂಭ ಮಾಡಲು ಅನುಮೋದಿಸಿ, ವಿನೋಬನಗರ ಶಾಖಾ ಗ್ರಂಥಾಲಯಕ್ಕೆ ಮಹಾನಗರ ಪಾಲಿಕೆ ವತಿಯಿಂದ ಉಚಿತವಾಗಿ ಕಟ್ಟಡವನ್ನು ಪಡೆಯಲು ಉಪನಿರ್ದೇಶಕರಿಗೆ ಸೂಚನೆ ನೀಡಿ ವಾರ್ಡ್ ನಂ. 20 ಹಾಗೂ 31 ರಲ್ಲಿ ಗ್ರಂಥಾಲಯ ತೆರೆಯಲು ಸೂಚನೆ ನೀಡಿದರು.
ಎಸ್ ನಿಜಲಿಂಗಪ್ಪ ಬಡಾವಣೆಯ ಗ್ರಂಥಾಲಯದ 1ನೇ ಮಹಡಿ ಕಟ್ಟಡ ಹಾಗೂ ಸಿಲ್ವರ್ ಜೂಬಿಲಿ ಶಾಖಾ ಗ್ರಂಥಾಲಯದಲ್ಲಿ ಇರುವ ಖಾಲಿ ಜಾಗದಲ್ಲಿ ಕಟ್ಟಡ ನಿರ್ಮಿಸಲು ಆದಷ್ಟು ಬೇಗನೆ ಲೋಕೋಪಯೋಗಿ ಇಲಾಖೆ ವತಿಯಿಂದ ಅಂದಾಜು ಪಟ್ಟಿ ತಯಾರಿಸಬೇಕು ಎಂದರು.
ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್ ಮಾತನಾಡಿ, ಎಂಸಿಸಿ ‘ಬಿ’ ಬ್ಲಾಕ್ ನಲ್ಲಿರುವ ಸೇವಾದಳ ಕಟ್ಟಡದ ಪಕ್ಕದಲ್ಲಿರುವ ಖಾಲಿ ಜಾಗವನ್ನು ಗ್ರಂಥಾಲಯಕ್ಕೆ ಪಡೆಯಲು ಹಾಗೂ ಮಹಾನಗರ ಪಾಲಿಕೆಯಲ್ಲಿ ಉಳಿದ ವಾರ್ಡ್ಗಳಲ್ಲಿ ಗ್ರಂಥಾಲಯವನ್ನು ಪ್ರಾರಂಭ ಮಾಡಬೇಕು ಎಂದು ಉಪನಿರ್ದೇಶಕರಿಗೆ ತಿಳಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ, ದ.ರಾ.ಮ ವಿಜ್ಞಾನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ರೂಪಶ್ರೀ, ರಾಜನಹಳ್ಳಿ ಸೀತಮ್ಮ ಬಾಲಕೀಯರ ಪ್ರೌಢಶಾಲೆಯ ಮುಖ್ಯೋಪಾದ್ಯಾಯ ಮಂಜಪ್ಪ ಎಂ.ಪಿ., ವೀರಶೈವ ಸಾಹಿತ್ಯ ಸೇವಾ ಮಂಡಳಿ ಕಾರ್ಯದರ್ಶಿ ಎಂ ಜಯಕುಮಾರ್, ಸದಸ್ಯ ಕಾರ್ಯದರ್ಶಿ ಪಿ.ಆರ್ ತಿಪ್ಪೇಸ್ವಾಮಿ ಹಾಗೂ ಗ್ರಂಥಾಲಯದ ಸಿಬ್ಬಂದಿ ಹಾಜರಿದ್ದರು.




