ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನೈರ್ಮಲ್ಯ ಶೌಚಾಲಯಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ಸಮೀಕ್ಷೆ ಕುರಿತು ನವಂಬರ್ 1 ರಿಂದ 15 ರ ಅವಧಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕರು ಹಾಗೂ ಕಿರಿಯ, ಸಹಾಯಕ ಅಭಿಯಂತರರು (ಒಳಚರಂಡಿ) ಇವರುಗಳಿಂದ ಸಮೀಕ್ಷೆ ಕಾರ್ಯ ನಿರ್ವಹಿಸಲಾಗಿದೆ.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ಯಾವುದೇ ಅನೈರ್ಮಲ್ಯ ಶೌಚಾಲಯಗಳು ಕಂಡು ಬಂದಿರುವುದಿಲ್ಲ. ಹಾಗೂ ಸಮೀಕ್ಷೆ ಅವಧಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳೆಂದು 149 ಸ್ವಯಂ ಘೋಷಣಾ ಅರ್ಜಿಗಳು ಸ್ವೀಕೃತವಾಗಿದ್ದು, ಸ್ಥಳ ಪರಿಶೀಲಿಸಲಾಗಿ, ಈ ಅರ್ಜಿದಾರರು ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಾರ್ಯದಲ್ಲಿ ತೊಡಗಿರದ ಕಾರಣ ಈ ಅರ್ಜಿಗಳು ತಿರಸ್ಕೃತಗೊಂಡಿವೆ.
ಸ್ವೀಕೃತ ಅರ್ಜಿಗಳ ಪಟ್ಟಿಯನ್ನು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಡಿ.26 ರೊಳಗೆ ಪೂರಕ ದಾಖಲೆಗಳೊಂದಿಗೆ ಆಯುಕ್ತರು, ದಾವಣಗೆರೆ ಮಹಾನಗರ ಪಾಲಿಕೆ ಸಲ್ಲಿಸಬೇಕೆಂದು ತಿಳಿಸಿದ್ದಾರೆ.




