ಬೆಂಗಳೂರು: ರಾಜ್ಯದ ಉನ್ನತ ಪೊಲೀಸ್ ಆಡಳಿತ ವ್ಯವಸ್ಥೆಯಲ್ಲಿ ಭಡ್ತಿ ಮತ್ತು ನೇಮಕ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಅಲೋಕ್ ಮೋಹನ್ ಅವರ ಅಧಿಕಾರ ಅವಧಿಯನ್ನು ಸರ್ಕಾರ ನಾಲ್ಕು ತಿಂಗಳು ವಿಸ್ತರಿಸಲು ಚಿಂತನೆ ನಡೆಸಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಒಂದು ವೇಳೆ ರಾಜ್ಯ ಸರ್ಕಾರ ಇಂತಹ ಆದೇಶ ಹೊರಡಿಸಿದ್ದೇ ಆದಲ್ಲಿ ಹಲವು ಹಿರಿಯ ಪೊಲೀಸ್ ಅಧಿಕಾರಿಗಳ ಬಡ್ತಿ ವಿಳಂಬವಾಗಲಿದೆ. ಇದರಿಂದ ಉನ್ನತ ಹುದ್ದೆಯ ನಿರೀಕ್ಷೆಯಲ್ಲಿದ್ದ ಹಲವರಿಗೆ ನಿರಾಸೆಯಾಗಲಿದೆ.
ಸದ್ಯ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಅಧಿಕಾರಾವಧಿ 4 ತಿಂಗಳು ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಅವರು ಇದೇ ಏಪ್ರಿಲ್ 30ಕ್ಕೆ ಸೇವಾನಿವೃತ್ತಿ ಹೊಂದಬೇಕಿದೆ. ಆದರೆ ಪೊಲೀಸ್ ಮಹಾನಿರ್ದೇಶಕ ಹುದ್ದೆ ಅಲಂಕರಿಸುವ ವ್ಯಕ್ತಿ ಎರಡು ವರ್ಷಗಳ ಕಾಲ ಈ ಹುದ್ದೆ ನಿರ್ವಹಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶವಿದೆ. ಇದರ ಅನ್ವಯ ಅವರ ಅಧಿಕಾರ ಅವಧಿ ಆಗಸ್ಟ್‌ವರೆಗೆ ವಿಸ್ತರಣೆ ಆಗಲಿದೆ. ಈ ಸಂಬಂಧ ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್, 4 ತಿಂಗಳು ಅವಧಿ ವಿಸ್ತರಣೆಗೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕನಿಷ್ಠ 2 ವರ್ಷಗಳ ಅಧಿಕಾರ ಅವಧಿ ಹೊಂದಿರಬೇಕು ಎಂದು ಸುಪ್ರೀಂಕೋರ್ಟ್ ಆದೇಶವಿದೆ. ಕೇಂದ್ರ ತನಿಖಾ ದಳ (ಸಿಬಿಐ) ನಿರ್ದೇಶಕರಾಗಿ ಪ್ರವೀಣ್ ಸೂದ್ ತೆರಳಿದ ಬಳಿಕ ತೆರವಾದ ಡಿಜಿ-ಐಜಿಪಿ ಹುದ್ದೆಗೆ 2023ರ ಮೇ 23ರಂದು ಸೇವಾ ಹಿರಿತನದ ಆಧಾರದ ಮೇರೆಗೆ ನೇಮಕ ಮಾಡಲಾಗಿತ್ತು.
ಮೊದಲು ಪ್ರಭಾರ ಡಿಜಿಪಿಯಾಗಿ ಕಾರ್ಯನಿರ್ವಹಿಸಿ 4 ತಿಂಗಳ ಬಳಿಕ ಹುದ್ದೆ ಖಾಯಂಗೊಂಡಿತು. ಪ್ರಭಾರ ಅವಧಿಯನ್ನು ಪರಿಗಣಿಸದೆ ಖಾಯಂ ಅವಧಿ ಮಾತ್ರ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದಾರೆ. ಈ ಮನವಿಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಇಲಾಖೆಯಲ್ಲಿ ಕೆಲ ಹಿರಿಯ ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.




