ಶಿವಮೊಗ್ಗ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‌ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿಕಾರ್ಮಿಕರು, ಗಿಗ್ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆಂಡಾಲ್ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು https://labour.ambedkarsahayahasta.in/api/Account/Login ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಯೋಜನೆಯ ಸೌಲಭ್ಯ ಪಡೆಯಲು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, 18 ರಿಂದ 60 ವಯೋಮಾನದವರಾಗಿರಬೇಕು. ಆದಾಯ ತೆರಿಗೆ ಪಾವತಿದಾರರು ಹಾಗೂ ಇಎಸ್‌ಐ/ಪಿಎಫ್ ಸೌಲಭ್ಯ ಹೊಂದಿರಬಾರದು.
ಅಪಘಾತದಿಂದ ಮರಣ ಹೊಂದಿದ್ದಲ್ಲಿ ರೂ. 1.00 ಲಕ್ಷ, ಅಪಘಾತದಲ್ಲಿ ಸಂಪೂರ್ಣ/ಶಾಶ್ವತ/ಬಾಗಶಃ ದುರ್ಬಲತೆ ಹೊಂದಿದ್ದಲ್ಲಿ ರೂ. 1.00 ಲಕ್ಷಗಳವರೆಗೆ, ಆಸ್ಪತ್ರೆ ವೆಚ್ಚ ಮರುಪಾವತಿ ಐವತ್ತು ಸಾವಿರ ರೂ.ಗಳವರೆಗೆ ಹಾಗೂ ಸಹಜ ಮರಣ ಮತ್ತು ಅಂತ್ಯಕ್ರಿಯೆ ವೆಚ್ಚಕ್ಕೆ ಹತ್ತು ಸಾವಿರ ರೂ.ಗಳ ಸೌಲಭ್ಯವನ್ನು ಈ ಯೋಜನೆಯಲ್ಲಿ ಪಡೆಯಬಹುದು.




